ಬೆಳಗಾವಿ,: ನಗರದ ಹೊಟೇಲ್ ಉದ್ಯಮಿ, ಹರ್ಷಾ ಹೊಟೇಲ್ ಮಾಲಿಕರಾದ ಸುರೇಶ ಗಣಪಯ್ಯ ನಾಯರ (53) ಅವರಿಂದಿಲ್ಲಿ ಅನಾರೋಗ್ಯದಿಂದ ನಿಧನರಾದರು.
ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಿವಾಸಿಯಾಗಿದ್ದ ಇವರು ಕಳೆದ ಮೂರು ದಶಕಗಳಿಂದ ಬೆಳಗಾವಿಯಲ್ಲಿ ಹೊಟೇಲ್ ಉದ್ಯಮ ನಡೆಸಿಕೊಂಡು ಬಂದಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ನಿಧನಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ನ. 14ರಂದು ಸಂಜೆ 4 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.