ಬೆಂಗಳೂರು :ಬೆಳಗಾವಿ ವಿಧಾನ ಮಂಡಲದ ಅಧಿವೇಶನದಲ್ಲಿ ಸೈಬರ್ ಕಾನೂನು ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು,
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ ಮೂಲಕ ಅನೇಕ ಗಣ್ಯರ ಭಾವನೆಗಳಿಗೆ ಧಕ್ಕೆ ತರುವ ಬೆಳವಣಿಗೆಗಳು ಸಂಭವಿಸುತ್ತಿವೆ. ಇವುಗಳನ್ನು ನಿಗ್ರಹಿಸಲು ಹೊಸ ಮಸೂದೆ ರೂಪಿಸಲಾಗುತ್ತಿದೆ ಎಂದು ಸಚಿವ ಜಿ.ಪರಮೇಶ್ವರ್ ಅವರಿಂದಿಲ್ಲಿ ತಿಳಿಸಿದರು.
ತುಮಕೂರಿನಲ್ಲಿ ಮಾತನಾಡಿದ, ಐಟಿ, ಗೃಹ ಇಲಾಖೆಗಳ ಸಮನ್ವಯದಲ್ಲಿ ಕರಡು ಮಸೂದೆ ಸಿದ್ಧಪಡಿಸಲಾಗುತ್ತಿದೆ. ಡಿ.4ರಿಂದ ಆರಂಭವಾಗಲಿರುವ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಈ ಹೊಸ ಸೈಬರ್ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದಿದ್ದಾರೆ.