ಬೆಳಗಾವಿ: ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇಲ್ಲಿನ ಮಹಾನಗರ ಪಾಲಿಕೆ ಸದಸ್ಯ ಅಭಿಜಿತ ಜವಳಕರ್‌ ಅವರಿಗೆ ನ್ಯಾಯಾಲಯವು ಸೋಮವಾರ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ.

ಆರೋಪಿ ಪರ ವಕಾಲತು ವಹಿಸಿದ ವಕೀಲ ರವಿರಾಜ ಪಾಟೀಲ, ‘ನಾವು 4ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೆವು. ಆದರೆ, ನ್ಯಾಯಾಧೀಶರು ರಜೆಯಲ್ಲಿರುವುದರಿಂದ 5ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿತು. ಪೊಲೀಸರು ಆಕ್ಷೇಪಣೆ ಸಲ್ಲಿಸದ ಕಾರಣ, ಮಧ್ಯಂತರ ಜಾಮೀನು ನೀಡಿತು. ಪ್ರಕರಣದ ತನಿಖೆಗೆ ಸಹಕರಿಸಬೇಕು. ಪ್ರತಿ ತಿಂಗಳ 30ರಂದು ಸಂಬಂಧಿತ ಪೊಲೀಸ್‌ ಠಾಣೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ’ ಎಂದರು.

ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಸಂಜೆ ಬಿಡುಗಡೆಯಾದ ಜವಳಕರ್‌ ಅವರನ್ನು ಮೇಯರ್‌ ಶೋಭಾ ಸೋಮನಾಚೆ, ಉಪಮೇಯರ್‌ ರೇಷ್ಮಾ ಪಾಟೀಲ ಸ್ವಾಗತಿಸಿದರು.