ಬೆಳಗಾವಿ : ಹೊಸ ವಂಟಮೂರಿ ಗ್ರಾಮದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಕೊನೆಗೂ ಸಿಐಡಿಗೆ ಹಸ್ತಾಂತರಿಸಿದೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಹಲ್ಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ, ಬಿಜೆಪಿಯ ಸತ್ಯ ಶೋಧನಾ ತಂಡದ ಸದಸ್ಯರು ಶನಿವಾರ ಭೇಟಿ ನೀಡಿದ್ದರು. ಭಾನುವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದವರು ಸ್ಥಳಕ್ಕೆ ಬಂದು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿತ್ತು.
ಈ ಕುರಿತು ಇದೀಗ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧರಿಸಿದೆ. ಸೋಮವಾರ ಸಿಐಡಿ ಅಧಿಕಾರಿಗಳ ತಂಡ ಪರಿಶೀಲನೆಗೆ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರೇಮಿಗಳಿಬ್ಬರು ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ, ಯುವಕನ ತಾಯಿ ಮೇಲೆ ದೌರ್ಜನ್ಯ ಎಸಗಲಾಗಿದೆ. ವಾರದ ಹಿಂದೆ ಘಟನೆ ನಡೆದಿದ್ದು, ಪೊಲೀಸರು ಈಗಾಗಲೇ 12 ಆರೋಪಿಗಳನ್ನು ಬಂಧಿಸಿದ್ದಾರೆ.