ಬೆಳಗಾವಿ : ಬಿಜೆಪಿ ವರಿಷ್ಠರು ಕೊನೆಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಅಭ್ಯರ್ಥಿಯನ್ನು ಘೋಷಿಸಿದ್ಮಾದಾರೆ. ಈ ಹಿಂದೆ ಚಿಕ್ಕೋಡಿ ಕ್ಷೇತ್ರಕ್ಕೆ ಅಣ್ಣಾ ಸಾಹೇಬ ಜೊಲ್ಲೆ ಹೆಸರು ಘೋಷಿಸಿ ಬೆಳಗಾವಿಯನ್ನು ನಿಗೂಡವಾಗಿಟ್ಟಿದ್ದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಕಣಕ್ಕಿಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸಾಕಷ್ಟು ದಿನಗಳ ನಂತರ ಅಳೆದು ತೂಗಿ ಲೆಕ್ಕಾಚಾರ ಹಾಕಿದ ಬಿಜೆಪಿ ವರಿಷ್ಠರು, ಇಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಹೆಸರಿಗೆ ಅಧಿಕೃತ ಮುದ್ರೆಯನ್ನೊತ್ತಿದ್ದಾರೆ. ಈ ಮೂಲಕ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯ ಬಿಜೆಪಿ ನಾಯಕರಿಂದ ವ್ಯಕ್ತವಾದ ವಿರೋಧಗಳಿಗೆ ಮಣಿಯದೆ ಟಿಕೆಟ್ ನೀಡುವ ಘೋಷಣೆ ಮಾಡಿದ್ದಾರೆ. ಈ ಮೂಲಕ ಇದುವರೆಗೆ ಇದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಬೆಳಗಾವಿ ಲೋಕಸಭಾ: ಬಿಜೆಪಿ ಅಭ್ಯರ್ಥಿ ಘೋಷಣೆ
