ಬೆಳಗಾವಿ : ಸುಮಾರು 140 ಕೋ.ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡ ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತಾಂತ್ರಿಕ ಕಾರಣದಿಂದ ಉದ್ಘಾಟನೆ ಸಾಧ್ಯವಾಗಿಲ್ಲ. ಶೀಘ್ರದಲ್ಲೇ ಲೋಕಾರ್ಪಣೆಗೊಂಡು ಜನಸೇವೆಗೆ ತೆರೆದುಕೊಳ್ಳಲಿದೆ ಎಂದು ಬಿಮ್ಸ್ ನಿರ್ದೇಶಕ ಅಶೋಕ ಕುಮಾರ ಶೆಟ್ಟಿ ಅವರಿಂದಿಲ್ಲಿ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಜಿಲ್ಲೆಯ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ತುರ್ತು ಸೇವೆ ಜನರಿಗೆ ಲಭ್ಯವಾಗುವ ರೀತಿಯಲ್ಲಿ ಆಸ್ಪತ್ರೆಯಲ್ಲಿ ಸಕಲ ಸೌಲಭ್ಯ ಅಳವಡಿಸಲಾಗಿದೆ. ಬೆಳಗಾವಿ ಜಿಲ್ಲೆಯ ಜೊತೆಗೆ ನೆರೆಯ ಗೋವಾ, ಮಹಾರಾಷ್ಟ್ರ ರಾಜ್ಯಗಳ ಜನರಿಗೆ ಈ ಆಸ್ಪತ್ರೆಯಿಂದ ಅನುಕೂಲವಾಗಲಿದೆ ಎಂದರು.
ಮೊದಲ ಮಹಡಿಯಲ್ಲಿ ನರವಿಜ್ಞಾನ, ನರ ಶಸ್ತ್ರಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ ಮತ್ತು ಎಂಡೋ ಕ್ರಿನಾಲಾಜಿ, ಎರಡನೇ ಮಹಡಿಯಲ್ಲಿ ಗ್ಯಾಸ್ಟ್ರೊಎಂಟ್ರಾಲಾಜಿ, ನೆಫ್ರಾಲಜಿ, ಸರ್ಜಿಕಲ್ ಗ್ಯಾಸ್ಟ್ರೊಎಂಟ್ರಾಲಾಜಿ , ಮೂರನೇ ಮಹಡಿಯಲ್ಲಿ ವಿಐಪಿ ಕೊಠಡಿ ಮತ್ತು ಜನರಲ್ ಕೊಠಡಿ, ನಾಲ್ಕನೇ ಮಹಡಿಯಲ್ಲಿ ಆಪರೇಷನ್ ಥಿಯೇಟರ್ ಗಳು ಇರಲಿವೆ ಎಂದು ಹೇಳಿದರು.