ಬೆಳಗಾವಿ :ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಜಯಗಳಿಸುವ ಹಾದಿಯಲ್ಲಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜ್ಯದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ವಿರುದ್ಧ 77,000ಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ಗೆಲುವಿಗೆ ಹತ್ತಿರವಾಗಿದ್ದಾರೆ.

ಇನ್ನು ಕೆಲವೇ ಸುತ್ತುಗಳು ಉಳಿದಿದ್ದು ಪ್ರಿಯಾಂಕಾ ಜಾರಕಿಹೊಳಿ ಅವರು ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದು ಒಟ್ಟಾರೆ ಗಮನ ಸೆಳೆದಿದೆ.