ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಖಾನಾಪುರ ಕ್ಷೇತ್ರವನ್ನು ಒಳಗೊಂಡಿರುವ ಉತ್ತರಕನ್ನಡ ಲೋಕಸಭಾ ಮತಕ್ಷೇತ್ರದಲ್ಲಿ ಈ ಸಲವು ಬಿಜೆಪಿ ಜಯಭೇರಿಯತ್ತ ಸಾಗಿದೆ.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಸದ್ಯದ ಮಾಹಿತಿಯಂತೆ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಅವರ ಎದುರಾಳಿಯಾಗಿ ಕಾಂಗ್ರೆಸ್ ಪಕ್ಷದಿಂದ ಖಾನಾಪುರದ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಪ್ರಬಲ ಸ್ಪರ್ಧೆ ಒಡ್ಡಿದ್ದರು.ಆದರು ಅವರು ಕಾಗೇರಿ ಅವರ ಮತಗಳ ಸಮೀಪಕ್ಕೂ ಮತ ಪಡೆಯದೇ ಇರುವುದು ಕಂಡುಬಂದಿದೆ.
ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದಲ್ಲಿ ಈ ಬಾರಿ ಹಾಲಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿರಸಿ ಮತಕ್ಷೇತ್ರದಲ್ಲಿ ಸೋಲು ಕಂಡಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ಕೊನೆಗೂ ಇಲ್ಲಿ ತನ್ನ ಗೆಲುವಿನ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ.
2ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ: ಗೆಲುವಿನತ್ತ ವಿಶ್ವೇಶ್ವರ ಹೆಗಡೆ ಕಾಗೇರಿ
