ಬೆಳಗಾವಿ,: ಸ್ಮಾರ್ಟ ಸಿಟಿಗೆ ಯೋಜನೆಯಡಿ ನಗರದಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ನಿರ್ವಹಣೆಯು ಗುತ್ತಿಗೆದಾರರ ಜವಾಬ್ದಾರಿಯಾಗಿದ್ದು, ಕಳಪೆ ಕಾಮಗಾರಿ, ಸೂಕ್ತ ನಿರ್ವಹಣೆ ಆಗದೇ ಇದ್ದರೆ ಸಂಬಂಧಿಸಿದ ಗುತ್ತಿಗೆದಾರರಿಗೆ ದಂಡ ವಿಧಿಸಲು ಅವಕಾಶವಿದ್ದು ಈ ಕುರಿತು ಕ್ರಮ ಜರಿಗಿಸುವಂತೆ ಸಂಸದರಾದ ಜಗದೀಶ ಶೆಟ್ಟರ ಅವರಿಂದಿಲ್ಲಿ ಸೂಚಿಸಿದರು.

ಬೆಳಗಾವಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನೆ, ಮನರೇಗಾ, ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು ಕೇಂದ್ರ ಪುರಸ್ಕೃತ ಯೋಜನೆಯಲ್ಲಿ ಜಿಲ್ಲೆ ಅತ್ಯುತ್ತಮ ಸ್ಥಾನದಲ್ಲಿರುವ ಕುರಿತು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಸಂಸದರ ಗಮನಕ್ಕೆ ತಂದರು.

ವಿಮಾನ ನಿಲ್ದಾಣಕ್ಕೆ ಈಗಾಗಲೇ ಅಗತ್ಯ ಜಮೀನು ಒದಗಿಸಲಾಗಿದ್ದು, ಕಂಪೌಂಡ್ ನಿರ್ಮಿಸಿ ಗ್ರಾಮಸ್ಥರಿಗೆ ರಸ್ತೆ ಕಲ್ಪಿಸುವುದಕ್ಕೆ ವಿಮಾನ ನಿಲ್ದಾಣದ ಪ್ರಾಧಿಕಾರದ ಹಂತದಲ್ಲಿ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು.

 ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ಗುಡಗುಂಟಿ, ಡಿ.ಸಿ.ಪಿ. ರೋಹನ್ ಜಗದೀಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರೈಲ್ವೆ, ಕೆ.ಎ.ಐ.ಡಿ.ಬಿ., ವಿಮಾನ ನಿಲ್ದಾಣ, ಜಲಜೀವನ್ ಮಿಷನ್, ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.