ಬೆಳಗಾವಿ,: ಬುದ್ಧಿಮಾಂದ್ಯ ಯುವತಿಯ ಮೇಲೆ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗ್ರಾಮದಲ್ಲಿ ಪ್ರಕ್ಷ್ಯುಬ್ಧ ವಾತಾರಣ ನಿರ್ಮಾಣವಾಗಿದೆ.
ಯುವತಿಯ ಮನೆಯವರು ಎಂದಿನಂತೆ ಜಮೀನಿಗೆ ತೆರಳಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿದ ಕಾಮಾಂದ ಬುದ್ಧಿಮಾಂದ್ಯ ಮಹಿಳೆಯನ್ನು ಬೆತ್ತಲೆಗೊಳಿಸಿ, ಬಳಿಕ ತಾನೂ ಒಳ ಉಡುಪು ಹೊರತುಪಡಿಸಿ ಮೈ ಮೇಲಿನ ಬಟ್ಟೆಯನ್ನು ಬಿಚ್ಚಿದ್ದಾನೆ. ಈ ವೇಳೆ ಯುವತಿಯ ಕುಟುಂಬ ಸದಸ್ಯನೋರ್ವ ಆಕಸ್ಮಿಕವಾಗಿ ಮನೆಗೆ ಬಂದಾಗ ಕಾಮಾಂಧನ ಬಣ್ಣ ಬಯಲಾಗಿದೆ.
ಈ ಘಟನೆಯಿಂದ ಆಕ್ರೋಶಗೊಂಡ ಯುವತಿಯ ಮನೆಯವರು ಅದೇ ಓಣಿಯಲ್ಲಿರುವ ಕಾಮುಕನ ಮನೆಗೆ ತೆರಳಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಸುತ್ತಮುತ್ತಲಿನ ಜನರಿಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಸಾರ್ವಜನಿಕರು ಗೂಸಾ ನೀಡಿದ್ದಾರೆ. ಬಳಿಕ ಕಾಮುಕ ಆತನ ಕುಟುಂಬಸ್ಥರನ್ನು ಗ್ರಾಮಸ್ಥರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕಾಕತಿ ಪೊಲೀಸ್ ಠಾಣೆಗೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಡಿಸಿಪಿ ಪಿ.ವಿ.ಸ್ನೇಹಾ ಹಾಗೂ ಗ್ರಾಮೀಣ ಎಸಿಪಿ ಗಂಗಾಧರ ದೌಡಾಯಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ಪೊಲೀಸ್ ಠಾಣೆಯ ಎದುರು ಗ್ರಾಮಸ್ಥರು ಜಮಾಯಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುದ್ದಿಮಾಂದ್ಯಳ ಮೇಲೆ ಅತ್ಯಾಚಾರ ಯತ್ನ: ಯುವಕನಿಗೆ ಥಳಿತ
