ಬೆಳಗಾವಿ : ರಾಜ್ಯದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಬೆಳಗಾವಿಯ ಸವದತ್ತಿಯ ಹೆಸರಾಂತ ಶಕ್ತಿ ದೇವಿಯ ಕ್ಷೇತ್ರದಲ್ಲಿ ಈ ಬಾರಿಹವ ದಾಖಲೆ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ.
ಸವದತ್ತಿ ಯಲ್ಲಮ್ಮ ಗುಡ್ಡದ ಯಲ್ಲಮ್ಮ ಕರ್ನಾಟಕವಲ್ಲದೆ ಇಡೀ ದಕ್ಷಿಣ ಭಾರತದ ಭಕ್ತರು ಆಗಮಿಸುವ ಸುಕ್ಷೇತ್ರ ಎನಿಸಿದೆ.
ಏಪ್ರಿಲ್ 1 ರಿಂದ ಮೇ 20 ರ ಅವಧಿಯಲ್ಲಿ ಭಕ್ತರು ₹ 1.96 ಕೋಟಿ ರೂ. ಮೌಲ್ಯದ ಕಾಣಿಕೆಯನ್ನು ಭಕ್ತರು ನೀಡಿದ್ದಾರೆ.
1.71 ಕೋಟಿ ನಗದು, 20.44 ಲಕ್ಷ ಮೌಲ್ಯದ ಚಿನ್ನಾಭರಣ, 4.44 ಲಕ್ಷ ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ. ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ಭಕ್ತರು ಪ್ರತಿಸಲದಂತೆ ಈ ಸಲವು ತಮ್ಮ ಇಷ್ಟಾರ್ಥ ಈಡೇರಿಸುವಂತೆ ಕೋರಿ ದೇವಿಗೆ ಕಾಣಿಕೆ ಸಮರ್ಪಿಸಿದ್ದಾರೆ. ಪ್ರತಿವರ್ಷ ಈ ಅವಧಿಯಲ್ಲಿ ಒಂದು ಕೋಟಿಯಿಂದ ಒಂದೂವರೆ ಕೋಟಿ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ ಇದೀಗ ಕಳೆದ ವರ್ಷದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆ ಪರಿಣಾಮವಾಗಿ ಮಹಿಳಾ ಭಕ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸಿ ದೇವಿ ದರ್ಶನ ಪಡೆಯುವ ಜೊತೆಗೆ ಕಾಣಿಕೆ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಲವು ಹೆಚ್ಚಿನ ಕಾಣಿಕೆ ಸಂಗ್ರಹವಾಗಿರುವುದು ವಿಶೇಷವಾಗಿದೆ.