ನವದೆಹಲಿ: ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಭಾರತೀಯ ವೈದ್ಯಕೀಯ ಸಂಘ (ಐಎಂಎ)ವು ಕರೆ ನೀಡಿದ ದೇಶಾದ್ಯಂತ ಆಗಸ್ಟ್‌ 17 ರಂದು ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ(ಒಪಿಡಿ)ಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಹೇಳಿದೆ. ಇದರ ಪರಿಣಾಮ ಬೆಳಗಾವಿ ಸೇರದಂತೆ ರಾಜ್ಯದ ಎಲ್ಲ ಆಸ್ಪತ್ರೆಗಳು ತಮ್ಮ ಸೇವೆಯನ್ನು ಬಂದ ಮಾಡಿವೆ.

ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಕ್ರೂರ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ದೇಶಾದ್ಯಂತ ಆಧುನಿಕ ಔಷಧದ ವೈದ್ಯರ ಸೇವೆಗಳನ್ನು 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದೆ.

 ಪ್ರತಿಭಟನೆಯು ಶನಿವಾರ, ಆಗಸ್ಟ್ 17, 2024 ರಂದು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗುತ್ತದೆ. ಆಗಸ್ಟ್ 18, 2024 ರ ಭಾನುವಾರ ಬೆಳಿಗ್ಗೆ 6 ಗಂಟೆಗೆ ಮುಕ್ತಾಯಗೊಳ್ಳುತ್ತದೆ ಎಂದು  ಬೆಳಗಾವಿಯ ಐಎಂಎ ಹೇಳಿದೆ. ಮುಷ್ಕರವನ್ನು ಐಎಂಎ ಬೆಂಬಲಿಸಿದೆ. ಎಲ್ಲಾ ತುರ್ತು ಪರಿಸ್ಥಿತಿಯಲ್ಲಿ 24 ಗಂಟೆಗಳ ಕಾಲ ತಮ್ಮ ಸೇವೆಗಳನ್ನು ನಿಲ್ಲಿಸುವುದಾಗಿ ತಿಳಿಸಿದೆ. ಭಾರತೀಯ ವೈದ್ಯಕೀಯ ಸಂಘದ ವೈದ್ಯರು 17.08.2024 ಬೆಳಗ್ಗೆ 6 ರಿಂದ 18.08.2024 ರವರೆಗೆ ಬೆಳಗಾವಿಯಲ್ಲಿ ಅನಿವಾರ್ಯವಲ್ಲದ ಸೇವೆಗಳನ್ನು ನಿಲ್ಲಿಸುವುದಾಗಿ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ತುರ್ತು ಸೇವೆಗಳು ಕಾರ್ಯನಿರ್ವಹಿಸುತ್ತವೆ.  ಒಪಿಡಿಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯವಿರುವುದಿಲ್ಲ.

 ಆ. 9 ರಂದು ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆಯೊಬ್ಬರು ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದರು. ಹೈಕೋರ್ಟ್‌ ಗಮನಿಸಿದಂತೆ ಸಾಕ್ಷ್ಯವನ್ನು ನಾಶಪಡಿಸಲು ಅಧಿಕಾರಿಗಳು ಪ್ರಯತ್ನಿಸುವ ಮೂಲಕ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದ್ದಾರೆ.

ತಮ್ಮ ಸಹೋದ್ಯೋಗಿಗೆ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಇತರ ವೈದ್ಯರು ಜನಸಮೂಹದ ಕೋಪವನ್ನು ಎದುರಿಸಿದರು. ಅವರಲ್ಲಿ ಹಲವರು ಮತ್ತೆ ಗಾಯಗೊಂಡರು. ಇಂತಹ ದೈಹಿಕ ಹಲ್ಲೆಗಳು ಮತ್ತು ಅಪರಾಧಗಳು ವೈದ್ಯರು, ದಾದಿಯರು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಬಗ್ಗೆ ಸರ್ಕಾರದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.