ಬೆಳಗಾವಿ : ಧಾರವಾಡ-ಕಿತ್ತೂರು-ಬೆಳಗಾವಿ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಸುಮಾರು 10 ಕಿಮೀ ಭೂಸ್ವಾಧೀನ ಮಾತ್ರ ಬಾಕಿ ಉಳಿದಿದೆ ಎಂದು ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. 

ಪತ್ರಕರ್ತರ ಜೊತೆ ಮಾತನಾಡಿದ ಅವರು, ಭೂಸ್ವಾದೀನದ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಹೇಳಿದರು.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಉತ್ತರ ಕನ್ನಡ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಶ್ನೆಗೆ ಉತ್ತರ ನೀಡಿ, ಧಾರವಾಡ-ಬೆಳಗಾವಿ ರೈಲು ಮಾರ್ಗ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಇನ್ನೂ ಅಗತ್ಯ ಭೂಮಿಯನ್ನು ಒದಗಿಸಿಲ್ಲ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಇದೀಗ ಸತೀಶ ಜಾರಕಿಹೊಳಿ ನೀಡಿದ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಕಿತ್ತೂರಿನ ಮೂಲಕ ಹಾದುಹೋಗುವ 73 ಕಿಲೋಮೀಟರ್ ರೈಲು ಮಾರ್ಗವನ್ನು ರೈಲ್ವೆ ಮತ್ತು ಕರ್ನಾಟಕ ಸರ್ಕಾರದ ನಡುವೆ ವೆಚ್ಚ ಹಂಚಿಕೆ ಆಧಾರದ ಮೇಲೆ ಅನುಮೋದಿಸಲಾಗಿದೆ.  ಸಚಿವರ ಪ್ರಕಾರ, ರಾಜ್ಯ ಸರ್ಕಾರವು ಯೋಜನೆಗೆ ಭೂಮಿಯನ್ನು ಉಚಿತವಾಗಿ ನೀಡುವ ನಿರೀಕ್ಷೆಯಿದೆ. 888 ಎಕರೆ ಭೂಮಿಗೆ ಮನವಿ ಸಲ್ಲಿಸಲಾಗಿದ್ದರೂ, ಇದುವರೆಗೆ ಯಾವುದೇ ಭೂಮಿಯನ್ನು ಯೋಜನೆಗೆ ವರ್ಗಾಯಿಸಲಾಗಿಲ್ಲ.  ಆದಾಗ್ಯೂ, ಸಚಿವ ಜಾರಕಿಹೊಳಿ ಉಲ್ಲೇಖಿಸಿದಂತೆ, ಧಾರವಾಡ-ಕಿತ್ತೂರು-ಬೆಳಗಾವಿ ರೈಲು ಮಾರ್ಗವನ್ನು ಹೆಚ್ಚಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ, ಸ್ವಲ್ಪ ಭಾಗ ಮಾತ್ರ ಉಳಿದಿದೆ ಎಂದು ಹೇಳಿದರು.