ಬೆಳಗಾವಿ: 2024ನೇ ಸಾಲಿನ ಕಿತ್ತೂರು ವಿಜಯೋತ್ಸವ ಸಂಭ್ರಮದಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಿಕಾಸ ಸೌಧದಲ್ಲಿಂದು ಕಂದಾಯ ಸಚಿವ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
200 ನೇ ಕಿತ್ತೂರು ವಿಜಯೋತ್ಸವ ಪ್ರಯುಕ್ತ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು 35 ಕೋ. ರೂ. ಮತ್ತು ಉತ್ಸವಕ್ಕೆ ಐದು ಕೋ.ರೂ. ಸೇರಿದಂತೆ ಒಟ್ಟು 40 ಕೋ.ರೂ.ಗಳ ಅನುದಾನವನ್ನು ಸಚಿವ ಕೃಷ್ಣ ಬೈರೇಗೌಡ ಅವರು ಬಿಡುಗಡೆಗೊಳಿಸಿದರು.