ಬೆಳಗಾವಿ : ನಿಯಂತ್ರಣ ಕಳೆದುಕೊಂಡ ವಾಹನವೊಂದು ಡಿವೈಡರಗೆ ತಾಗಿ ನಡೆದುಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟ ಘಟನೆ ನಗರದ ಮಹಾತ್ಮಾ ಫುಲೆ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸಂತಸೇನಾ ರಸ್ತೆಯ ನಿವಾಸಿ ಶ್ರೀಧರ ಪವಾರ(42) ಎಂಬುವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮೃತ ಶ್ರೀಧರ ಎಲೆಕ್ಟ್ರಿಷಿಯನ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದು, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಶ್ರೀಧರ ಗುರುವಾರ ಬೆಳಗ್ಗೆ ಎಂದಿನಂತೆ ಬೆಳಗಿನ ವಾಕಿಂಗ್ ಹೋಗಿದ್ದರು. ನಿಯಂತ್ರಣ ತಪ್ಪಿದ ಬೊಲೇರೋ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಕುರಿತು ಸಂಚಾರ ದಕ್ಷಿಣ ಪೊಲೀಸರಿಗೆ ದೂರು ದಾಖಲಾಗಿದೆ.