ಬೆಳಗಾವಿ: ಸೆಂಟ್ರಿಂಗ್ ಸಾಮಾಗ್ರಿ ತುಂಬಿಕೊಂಡು ಹೊರಟಿದ್ದ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ನಡೆದಿದೆ.
ರಾಘವೇಂದ್ರ ಕೋಲಕಾರ (22) ಮೃತ ದುರ್ದೈವಿ. ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ಹೊರಟಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ. ಘಟನಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.