ಬೆಳಗಾವಿ : ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ತಹಶೀಲ್ದಾರ ಕಚೇರಿಯಲ್ಲಿ ನಡೆದಿದೆ.

ಮೂಲತಃ ರಾಯಭಾಗ ತಾಲಕಿನವರಾದ ಸದ್ಯ ಬೆಳಗಾವಿಯಲ್ಲಿ ವಾಸವಾಗಿರುವ ರುದ್ರಣ್ಣ ಯಡವಣ್ಣವರ (40) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ತಹಶೀಲ್ದಾರ ಕಚೇರಿಯಲ್ಲಿ ದ್ವೀತಿಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬೆಳಗಾವಿಯಿಂದ ಸವದತ್ತಿಗೆ ಅವರನ್ನು ವರ್ಗಾಯಿಸಲಾಗಿತ್ತು. ಪಾಲಿಕೆಯ ಹಳೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಹಸೀಲ್ದಾರ್ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡು ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸಿಬ್ಬಂದಿಯ ಪತ್ನಿ ಸಹ ಸರ್ಕಾರಿ ನೌಕರರು. ಖಡೇ ಬಜಾರ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.