ಬಾಗಲಕೋಟೆ :ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದ್ದು, ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಬಿಪಿಎಲ್ ಕಾರ್ಡ್ ಗಳ ರದ್ದಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವದೇ ತಪ್ಪು. ಅನರ್ಹರ ಕಾರ್ಡ್ ಗಳನ್ನು ವಾಪಸ್ ಪಡೆಯಬಹುದು ಎನ್ನುವ ಆಲೋಚನೆ ಇದ್ದು, ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ.
ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯುತ್ತೇವೆ ಎಂದರು.
40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ ಅಂದರು.
ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ಬಿಜೆಪಿಯವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು, ವಿಫಲರಾದರು ಎಂದರು.