ಬೆಳಗಾವಿ: ರೆಡ್‌ ಬರ್ಡ ಸಂಸ್ಥೆಗೆ ಸೇರಿದ ಫೈಲಟ್‌ ತರಬೇತಿ ವಿಮಾನವು ಹೊಲದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಬದಿಯ ಹೊಲದಲ್ಲಿ ನಡೆದಿದೆ. ವಿಮಾನದಲ್ಲಿ ಇಬ್ಬರು ತರಬೇತಿ ಇದ್ದು, ಓರ್ವ ತರಬೇತುದಾರನ ಕಾಲಿಗೆ ಕಾಲಿಗೆ ಗಾಯವಾಗಿದೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ತರಬೇತುದಾರ ವಿಮಾನವು ಟೇಕಾಫ್ ಆಗಿದ್ದು, ಕೆಲವು ನಿಮಿಷಗಳ ನಂತರ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅನಿವಾರ್ಯವಾಗಿ ಭೂಸ್ಪರ್ಶ ಮಾಡಲಾಯಿತು. ವಿಮಾನ ನಿಲ್ದಾಣದ ಸಮೀಪದ ಹೊಲದಲ್ಲಿ ಇಳಿಸಲಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸಾಂಬ್ರಾ ವಿಮಾನ ನಿಲ್ದಾಣ ಅಧಿಕಾರಿಗಳು ಸ್ಪಷ್ಟನೆ  ನೀಡಿದ್ದಾರೆ.  ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು.

ಇದರಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಒಬ್ಬ ತರಬೇತುದಾರರ ಕಾಲಿಗೆ ಗಾಯಗಳಾಗಿದ್ದು, ವಿಮಾನದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಪೊಲೀಸರು ಮತ್ತು ಭಾರತೀಯ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಈ‌ ಕುರಿತು ಮಾರಿಹಾರಳ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ