ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಭೂತರಾಮನಟ್ಟಿ ಬಳಿ ಇರುವ ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದ ಹೆಣ್ಣು ಸಿಂಹ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಮೃಗಾಲಯ ಅಧಿಕಾರಿಗಳು ತಿಳಿಸಿದ್ದಾರೆ.
ನಿರುಪಮಾ ಎಂಬ 15 ವರ್ಷ ಈ ಹೆಣ್ಣು ಸಿಂಹವು ಕಳೆದ 15 ದಿನಗಳಿಂದ ವನ್ಯಜೀವಿ ವೈದ್ಯರ ಸಲಹೆಯಂತೆ ಉಪಚರಿಸಲಾಗುತ್ತಿತ್ತು. ಆದರೆ, ಇಂದು ಮಧ್ಯಾಹ್ನ 12.55ಕ್ಕೆ ಚಿಕಿತ್ಸೆ ಫಲಕಾರಿ ಆಗದೇ ಮೃಗಾಲಯದಲ್ಲಿ ಸಾವನ್ನಪ್ಪಿದೆ. ವನ್ಯಜೀವಿ ವೈದ್ಯರ ಸಲಹೆಯಂತೆ ಮರಣೋತ್ತರ ಪರೀಕ್ಷೆ ಮಾಡಿ ಮೃಗಾಲಯ ಆವರಣದಲ್ಲೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಈ ವೇಳೆ ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೆಶಕ ಮಾರಿಯಾ ಕ್ರಿಸ್ಟೋ ರಾಜಾ, ವಲಯ ಅರಣ್ಯ ಅಧಿಕಾರಿ ಪವನ ಕುರನಿಂಗ, ಹಿರಿಯ ವೈದ್ಯಾಧಿಕಾರಿ ಡಾ.ಹನುಮಂತ ಸಣ್ಣಕ್ಕಿ, ತಜ್ಞ ವೈದ್ಯ ಡಾ.ಶ್ರೀಕಾಂತ ಕೋಹಳ್ಳಿ, ಮೃಗಾಲಯದ ವೈದ್ಯ ಡಾ.ನಾಗೇಶ ಹುಯಿಲಗೋಳ ಸೇರಿ ಸಿಬ್ಬಂದಿಗಳು ಇದ್ದರು.
ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಹೆಣ್ಣು ಸಿಂಹ ಸಾವು
