ಬೆಳಗಾವಿ : ಕರ್ನಾಟಕದಲ್ಲಿ 88 ಪಾಕಿಸ್ತಾನಿ ಪ್ರಜೆಗಳು ವಾಸವಾಗಿದ್ದು, ಅವರಲ್ಲಿ ಆರು ಜನರು ಬೆಳಗಾವಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಲಭ್ಯ ಮಾಹಿತಿಯಿಂದ ತಿಳಿದುಬಂದಿದೆ.
ಈ ವ್ಯಕ್ತಿಗಳು ದೀರ್ಘಾವಧಿಯ ವೀಸಾದಲ್ಲಿ ಭಾರತದಲ್ಲಿ ವಾಸಿಸುತ್ತಿದ್ದು, ರಾಷ್ಟ್ರೀಯ ಭದ್ರತೆಯನ್ನು ದೃಷ್ಟಿಯಲ್ಲಿಟ್ಟು, ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಅವರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಧಾರ್ಮಿಕ ಕಿರುಕುಳದಿಂದ ಆಶ್ರಯ ಪಡೆಯಲು ಭಾರತಕ್ಕೆ ಬಂದ ಹಿಂದೂ, ಸಿಖ್, ಬೌದ್ಧ ಮತ್ತು ಜೈನ ಸಮುದಾಯಗಳಿಗೆ ಸೇರಿದ ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ಸರ್ಕಾರ ವಿನಾಯಿತಿ ನೀಡಿದೆ.
ಈ ವ್ಯಕ್ತಿಗಳಿಗೆ ತಾತ್ಕಾಲಿಕವಾಗಿ ಉಳಿಯಲು ಅವಕಾಶ ನೀಡಲಾಗಿದೆ,
ಜಿಲ್ಲೆಯ ಎಲ್ಲ ಪಾಕಿಸ್ತಾನಿ ಪ್ರಜೆಗಳ ಹಿನ್ನೆಲೆಯನ್ನು ಅಧಿಕಾರಿಗಳು ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಅನುಮಾನಾಸ್ಪದ ಚಟುವಟಿಕೆ ಕಂಡು ಬಂದರೆ ಕ್ರಮಕ್ಕೆ ಸನ್ನದ್ದವಾಗಿದ್ದಾರೆ. ಸರ್ಕಾರವು ತನ್ನ ದೃಢವಾದ ನಿಲುವು ತೆಳೆದಿದ್ದು, ಪೊಲೀಸ್ ಮತ್ತು ಗುಪ್ತಚರ ಇಲಾಖೆಗಳು ಎಚ್ಚರಿಕೆ ವಹಿಸಿವೆ.
ಇತ್ತೀಚೆಗೆ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯ ನಂತರ, ಭಾರತದಲ್ಲಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಮೇಲೆ ಕೇಂದ್ರ ಸರ್ಕಾರ ತನ್ನ ಕಠಿಣ ಕ್ರಮವನ್ನು ತೀವ್ರಗೊಳಿಸಿದೆ. ಪಾಕಿಸ್ತಾನಿ ಪ್ರಜೆಗಳು ಕೂಡಲೇ ದೇಶ ತೊರೆಯುವಂತೆ ಆದೇಶ ಹೊರಡಿಸಲಾಗಿದೆ. ರಾಜ್ಯಗಳು ತಮ್ಮ ವ್ಯಾಪ್ತಿಯೊಳಗೆ ಪಾಕಿಸ್ತಾನಿ ಪ್ರಜೆಗಳೆಷ್ಟಿದ್ದಾರೆ ಎಂದು ಕೇಂದ್ರವು ವರದಿ ನೀಡುವಂತೆ ಕೇಳಿತ್ತು.