ಬೆಳಗಾವಿ; ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ರಾತ್ರಿ ಕಾಡಾನೆ ದಾಳಿ ನಡೆಸಿ ಬೆಳೆಯನ್ನು ನಾಶ ಪಡಿಸಿದು, ರೈತರು ಅಪಾರ ಪ್ರಮಾಣದ ಹಾನಿ ಅನುಭವಿಸುವಂತಾಗಿದೆ.
ಗ್ರಾಮದ ರೈತ ಸುರೇಶ ಲೋಹಾರ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ದಾಳಿ ನಡೆಸಿ ಬೆಳೆ ತಿಂದು ನಾಶಪಡಿಸಿದೆ. ವರ್ಷವಿಡಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಕಾಡಾನೆ ಒಂದೆ ರಾತ್ರಿ ನಾಶ ಪಡಿಸುತ್ತಿವೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ, ಕಾಕತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.