ಬೆಳಗಾವಿ: ವಿದ್ಯುತ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ  ಜೊತೆಗೆ ರಾಜ್ಯದ ಎಲ್ಲ ಜಿಲ್ಲಾ ವಾಣಿಜ್ಯ ಮಂಡಳಿಯು 22 ಜೂನ್ 2023 ರಂದು ಒಂದು ದಿನದ ಕರ್ನಾಟಕ ಬಂದ್‌ಗೆ ಕರೆ ನೀಡಿದೆ.

ರಾಜ್ಯದ ಎಲ್ಲ ಎಸ್ಕಾಂಗಳು ವಿದ್ಯುತ್ ದರದಲ್ಲಿ ತೀವ್ರ ಬೆಲೆ ಏರಿಕೆಯನ್ನು ವಿರೋಧಿಸಿ  ಜೂನ್ 22 ರಂದು ತಮ್ಮ ವ್ಯವಹಾರ ಹಾಗೂ ಕಾರಖಾನೆಗಳಲ್ಲಿನ ಉತ್ಪಾದನೆಯನ್ನು ನಿಲ್ಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ವಾಣಿಜ್ಯ ಮಂಡಳಿಯು ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ವಿನಂತಿಸಲಾಗಿದೆ.

ವಿದ್ಯುತ ದರದಿಂದ ಕೈಗAರಿಕೆಗಳಿಗೆ ಆಗುವ ತೊಂದರೆ ಹಾಗೂ ಪರಿಣಾಮದ ಗಂಭೀರತೆಯನ್ನು ಕಳೆದ 8 ದಿನಗಳಿಂದ ಅಧಿಕಾರಿಗಳಿಗೆ ಹಾಗೂ ಸರಕಾರಕ್ಕೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆದರೆ, ಅಧಿಕಾರಿಗಳು ಅಥವಾ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಧನಾತ್ಮಕವಾದ ಸ್ಫಂಧನೆ ದೊರೆಯದ ಕಾರಣ ಸರ್ಕಾರದ ಗಮನ ಸೆಳೆಯಲು ಈ ಬಂದ್‌ಗೆ ಕರೆ ನೀಡುತ್ತಿದ್ದೇವೆ.

ನಾವು ಪರಿಹಾರವನ್ನು ಕಂಡುಕೊಳ್ಳಲು ಮತ್ತು ವಿದ್ಯುತ್ ಶುಲ್ಕದಲ್ಲಿ ಕಡಿತವನ್ನು ಪಡೆಯಲು ಬಯಸುತ್ತೇವೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತದೆ ಎಂಬ ಭರವಸೆ ಇದೆ. ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಮತ್ತು ಈಗಾಗಲೇ ವಿದ್ಯುತ್ ದರ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿವೆ.

ಗದಗ, ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟಿ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಂಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ ಕರ್ನಾಟಕ, ಹಾವೇರಿ, ಹಾವೇರಿ, ಕರ್ನಾಟಕ ಜಿಲ್ಲಾ ಚೇಂಬರ್ ,ಬೆಳಗಾವಿ ಮತ್ತು ಇತರ ಕೈಗಾರಿಕಾ ಸಂಘಗಳು ಆಂದೋಲನದಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡಿವೆ ಎಂದು ತಿಳಿಸಲಾಗಿದೆ. ಅಲ್ಲದೇ ಶಾಸಕ ಬಸನಗೌಡಾ ಪಾಟೀಲ ಯತ್ನಾಳ ಅವರೂ ಕೂಡ ತಮ್ಮ ಟ್ವಟರ ಖಾತೆಯಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.