ಬೆಳಗಾವಿ,: ಹವಾಮಾನ ಇಲಖೆಯು ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ರೆಡ್ ಅಲರ್ಟ ಎಚ್ಚರಿಕೆ ನೀಡಿದ ಕಾರಣ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿ: 20-08-2025 ರಂದು ರಜೆ ಘೋಷಿಸಿ ಆದೇಶಿಸಿದೆ.

ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ, ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.