ನವದೆಹಲಿ: ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ತಮ್ಮ ಅದ್ವಿತೀಯ ಸೇವೆ ಹಾಗೂ ದೂರದೃಷ್ಟಿಯ ನಾಯಕತ್ವದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಕೆಎಲ್ ಇ ಸಂಸ್ಥೆಯ ನಿಕಟಪೂರ್ವ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಗೆ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.
ಡಾ. ಪ್ರಭಾಕರ ಕೋರೆ ಅವರು ಶಿಕ್ಷಣವನ್ನು ಸಾಮಾಜಿಕ ಪರಿವರ್ತನೆಯ ಶಕ್ತಿಶಾಲಿ ಸಾಧನವೆಂದು ನಂಬಿ, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಕೆಎಲ್‌ಇ ಸಂಸ್ಥೆಯ ಮೂಲಕ ವೈದ್ಯಕೀಯ, ತಾಂತ್ರಿಕ, ವೈದ್ಯಕೀಯ ಸಂಶೋಧನೆ, ಇಂಜಿನಿಯರಿಂಗ್ ಹಾಗೂ ಸಾಮಾನ್ಯ ಶಿಕ್ಷಣ ಕ್ಷೇತ್ರಗಳಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ಬೆಳಕು ನೀಡಿದ್ದಾರೆ.
ಶಿಕ್ಷಣದ ಜೊತೆಗೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉತ್ತೇಜನಕ್ಕೂ ಅವರು ವಿಶೇಷ ಕೊಡುಗೆ ನೀಡಿದ್ದಾರೆ. ಮೌಲ್ಯಾಧಾರಿತ ಶಿಕ್ಷಣ, ಸಂಸ್ಕೃತಿ ಮತ್ತು ಮಾನವೀಯತೆಯ ಮಹತ್ವವನ್ನು ಯುವಪೀಳಿಗೆಗೆ ತಿಳಿಸುವಲ್ಲಿ ಅವರ ಪಾತ್ರ ಶ್ಲಾಘನೀಯವಾಗಿದೆ. ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತವಾಗದೆ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂಬ ಅವರ ಚಿಂತನೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಡಾ. ಪ್ರಭಾಕರ ಕೋರೆಯವರ ಈ ಸಾಧನೆಯನ್ನು ಗುರುತಿಸಿ ನೀಡಲಾದ ಪದ್ಮಶ್ರೀ ಪ್ರಶಸ್ತಿ ಅವರ ಸೇವೆಗೆ ಸಂದ ಗೌರವವಾಗಿದ್ದು, ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಗಣ್ಯರು ಕೆಎಲ್‌ಇ ಸಂಸ್ಥೆಯ ಸಮಸ್ತ ಪರಿವಾರ, ಗಣ್ಯರು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕೋರೆ ಅವರು,ಪ್ರಶಸ್ತಿ ಸಿಕ್ಕಿರೋದು ಖುಷಿ ತಂದಿದೆ.
ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರೋದುಎಂದು ಸಂತಸ ವ್ಯಕ್ತಪಡಿಸಿದರು.
ಪ್ರಶಸ್ತಿಯನ್ನು ರೈತರು, ಸಂಸ್ಥೆ ಸಿಬ್ಬಂದಿಗಳಿಗೆ ಅರ್ಪಣೆ ಮಾಡುತ್ತೇನೆ.
ಮೊದಲಿನಿಂದಲೂ ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷದ ಕೊರತೆ ಇತ್ತು. ನಮ್ಮ ಭಾಗ ಮುಂಬೈ ಪ್ರಾಂತ ಶಿಕ್ಷಣದಿಂದ ವಂಚಿತ ಆಗಿತ್ತು
ಹಾಗಾಗಿ ಸಂಸ್ಥೆಯನ್ನ ಬೆಳೆಸಿ ಹಳ್ಳಿಯ ಜನರ ಮನೆಗೆ ಶಿಕ್ಷಣ ಸಿಗಬೇಕೆಂದು ಕೆಲಸ ಮಾಡಿರುವೆ. ಇದನ್ನು ಗುರುತಿಸಿ ಪ್ರಶಸ್ತಿ ನೀಡಿದ್ದಕ್ಕೆ ರಾಷ್ಟ್ರಪತಿಗಳಿಗೆ ಧನ್ಯವಾದಗಳು ಸಲ್ಲಿಸುತ್ತೇನೆ
ಇನ್ನೂ ಬಹಳಷ್ಟು ಶಿಕ್ಷಣ ಹಿಂದುಳಿದಿದೆ
ಶೀಮಾ ಭಾಗದಲ್ಲಿ ಕನ್ನಡ ಬೆಳೆಸುವ ಕೆಲಸ ಮಾಡಿದ್ದೇನೆ
ನಿಪ್ಪಾಣಿಯಲ್ಲಿ ಮೊದಲ ಕನ್ನಡ ಶಾಲೆ ತೆರೆದಿದ್ದೇನೆ
ನಮ್ಮ ಶಿಕ್ಷಣ ಸಂಸ್ಥೆಗಳು 40ರಷ್ಟು ಹಳ್ಳಿಗಳಲ್ಲಿವೆ. ನಿರ್ಮಾಣ ಮಾಡಿರುವೆ
ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕೊರತೆ ನಿಗಿಸೋ ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.