ಬೆಳಗಾವಿ,:ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್ ಆವರಣದ ಸ್ವಿಮಿಂಗ್ ಪೂಲ್‌ನಲ್ಲಿ ಈಜುತ್ತಿರುವಾಗಲೇ ಹೃದಯಾಘಾತವಾಗಿ ತೀವ್ರ ಅಸ್ವಸ್ಥಗೊಂಡ ಸೇನಾಧಿಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯದಲ್ಲಿಯೇ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್‌ಸಿಂಗ್ ಅವರು
ಬೆಳಗಾವಿಯ ಎಂಎಲ್ಐಆರ್‌ಸಿ ಕಮಾಂಡೋ ವಿಂಗ್‌ನಲ್ಲಿ ತರಬೇತಿ ಪಡೆಯುತ್ತಿದ್ದರು. ಅಧಿಕಾರಿ
ಸ್ವಿಮಿಂಗ್ ಮಾಡುವಾಗಲೇ ತೀವ್ರ ಹೃದಯಾಘಾತವಾಗಿದೆ. ತಕ್ಷಣವೇ ಅಧಿಕಾರಿಯನ್ನು ಮೇಲಕ್ಕೆ ತಂದು ಲೈಫ್ ಗಾರ್ಡ್ ಪ್ರದೀಪ್ ಕುಮಾರ್ ಪ್ರಥಮ ಚಿಕಿತ್ಸೆ ನೀಡಿ, ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ
ಮಾರ್ಗಮಧ್ಯದಲ್ಲೇ ಲೆಫ್ಟಿನೆಂಟ್ ಅಮಿತ್ ಸಿಂಗ್ ಅವರು ಸಾವನ್ನಪ್ಪಿದ್ದಾರೆ. ಈ ಕುರಿತು
ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ವೀಮಿಂಗ್ ಮಾಡುವಾಗಲೇ ಹೃದಯಾಘಾತದಿಂದ ಸೇನಾಧಿಕಾರಿ ಸಾವು
