ಬೆಳಗಾವಿ: ಪ್ರಸಕ್ತ ಮುಂಗಾರು ಮಳೆಯ ಪ್ರಮಾಣ ಕಡಿಮೆಯಾಗಿದ್ದು, ವಾಡಿಕೆಯಂತೆ ಸುರಿಯಬೇಕಾದ ಮಳೆಯು ಶೇ. 60 ರಷ್ಟು ಕೊರತೆಯುಂಟಾಗಿದೆ. ವಾಡಿಕೆಯಂತೆ (ಮಿ.ಮೀ) 175: ವಾಸ್ತವಿಕ (ಮಿ.ಮೀ) 71 ಮಿ.ಮೀ. ಹಾಗೂ ಕೊರತೆ (ಶೇಕಡಾ) -60 ರಷ್ಟಿರುತ್ತದೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಆದ ಮಳೆಯ ಪ್ರಮಾಣ ಈ ಕೆಳಗಿನಂತಿದೆ.
ಬಾಗಲಕೋಟೆ: ವಾಡಿಕೆ (ಮಿ.ಮೀ) 94: ವಾಸ್ತವಿಕ (ಮಿ.ಮೀ) 31 ಮಿ.ಮೀ. ಹಾಗೂ ಕೊರತೆ (ಶೇಕಡಾ) -67 ರಷ್ಟಿರುತ್ತದೆ.
ವಿಜಯಪುರ: ವಾಡಿಕೆ (ಮಿ.ಮೀ) 98: ವಾಸ್ತವಿಕ (ಮಿ.ಮೀ) 47 ಮಿ.ಮೀ. ಹಾಗೂ ಕೊರತೆ (ಶೇಕಡಾ) -52 ರಷ್ಟಿರುತ್ತದೆ.
ಗದಗ: ವಾಡಿಕೆ (ಮಿ.ಮೀ) 95: ವಾಸ್ತವಿಕ (ಮಿ.ಮೀ) 65 ಮಿ.ಮೀ. ಹಾಗೂ ಕೊರತೆ (ಶೇಕಡಾ) -32 ರಷ್ಟಿರುತ್ತದೆ.
ಹಾವೇರಿ: ವಾಡಿಕೆ (ಮಿ.ಮೀ) 146: ವಾಸ್ತವಿಕ (ಮಿ.ಮೀ) 75 ಮಿ.ಮೀ. ಹಾಗೂ ಕೊರತೆ (ಶೇಕಡಾ) -49 ರಷ್ಟಿರುತ್ತದೆ.
ಧಾರವಾಡ: ವಾಡಿಕೆ (ಮಿ.ಮೀ) 147: ವಾಸ್ತವಿಕ (ಮಿ.ಮೀ) 71 ಮಿ.ಮೀ. ಹಾಗೂ ಕೊರತೆ (ಶೇಕಡಾ) -51 ರಷ್ಟಿರುತ್ತದೆ.
ಉತ್ತರ ಕನ್ನಡ: ವಾಡಿಕೆ (ಮಿ.ಮೀ) 859: ವಾಸ್ತವಿಕ (ಮಿ.ಮೀ) 506 ಮಿ.ಮೀ. ಹಾಗೂ ಕೊರತೆ (ಶೇಕಡಾ) -41 ರಷ್ಟಿರುತ್ತದೆ.
ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹಾಗೂ ಜಲಾಶಯಗಳಲ್ಲಿ ಇರುವ ನೀರಿನ ಸಂಗ್ರಹ ಕುರಿತು ಪ್ರಾದೇಶಿಕ ಆಯುಕ್ತರು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ಸಭೆಯಲ್ಲಿ ಆಲಮಟ್ಟಿ ಜಲಾಶಯ, ಮಲಪ್ರಬಾ ಯೋಜನೆ, ಘಟಪ್ರಬಾ ಯೋಜನೆ ಹಾಗೂ ಹಿಪ್ಪರಗಿ ಯೋಜನೆಯ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಸಂಬಂಧಿಸಿದ ಸೂಪರಿಂಟೆಂಡಿಂಗ್ ಎಂಜಿಯರ್, ಸಣ್ಣ ನೀರಾವರಿ ಇಲಾಖೆ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧೀಕ್ಷಕ ಅಭಿಯಂತರರು ಮತ್ತು ಇತರೆ ಅಧಿಕಾರಿಗಳು ಹಾಜರಿದ್ದರು.
