ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಶಿಕ್ಷಣ, ವೈದ್ಯಕೀಯ, ಪ್ರವಾಸೋದ್ಯಮ, ಕೈಗಾರಿಕೆ, ಸಂಸ್ಕೃತಿ ಇಲಾಖೆಗಳಡಿ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವ ನೀಡಿದ್ದು ಗ್ಯಾರಂಟಿಗಳಿಗೆ ಸುಮಾರು 52 ಸಾವೀರ ಕೋಟಿಗೂ ಅಧಿಕ ಹಣವನ್ನು ಮಈಸಲಿಟ್ಟರೆ ಬೆಳಗಾವಿ ಅಭಿವೃದ್ದಿಗೂ ಸ್ವಲ್ಪ ಗಮನ ಹರಿಸಿದ್ದಾರೆ. ತಮ್ಮ ತವರು ಜಿಲ್ಲೆ ಮೈಸೂರಿಗೆ ಬಂಪರ ಕೊಡುಗೆ ನೀಡಿದರೆ, ಬೆಳಗಾವಿಗೆ ವನ್ಯಜೀವಿ ಹಾಗೂ ಪುನರ್ವಸತಿ ಕೇಂದ್ರ ಹಾಗೂ ಸೂಪರ ಸ್ಪೆಶಾಲಿಟಿ ಆಸ್ಪತ್ರೆ, ಸವದತ್ತಿ ಯಲ್ಲಮ್ಮನ ಗುಡ್ಡ ಅಭಿವೃದ್ದಿ, ಐತಿಹಾಸಿಕ ಕಿತ್ತೂರು ಕೋಟೆಗೆ 3ಡಿ ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆ ಅನುಷ್ಠಾನ ಮಾಡಲಾಗುವದೆಂದು ಬಜೆಟನಲ್ಲಿ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಜೊತೆಗೆ ಮೈಸೂರು ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ. ಮೀಸಲಿಡಲಾಗಿದೆ. ಬೆಳಗಾವಿಯಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲಾಗುವದು.

ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ವನ್ಯಜೀವಿ ಕೇಂದ್ರ, ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಎರಡು ಹೊಸ ಆನೆ ಕಾರ್ಯಪಡೆಗಳನ್ನು ರಚನೆ, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ವನ್ಯಜೀವಿ ಪುನರ್ವಸತಿ ಕೇಂದ್ರಗಳ ನಿರ್ಮಾಣ, ಸವದತ್ತಿ ಯಲ್ಲಮ್ಮನ ಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮ ಸಮಗ್ರ ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಬೆಳಗಾವಿಯ ಸಮೀಪದ ಕಣಗಲಾ ಕೈಗಾರಿಕಾ ಪ್ರದೇಶ ಸ್ಥಾಪನೆ ಮತ್ತು ಅಭಿವೃದ್ದಿಗೊಳಿಸುವದರ ಜೊತೆಗೆ ರಾಜ್ಯದ ಹುಬ್ಬಳ್ಳಿ, ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೋಡ್ಕಣಿ, ಚಾಮರಾಜನಗರದ ಬದನಗುಪ್ಪೆ, ವಿಜಯಪುರದ ಇಂಡಿ ಮತ್ತು ಯಾದಗಿರಿಯ ಶಹಪೂರ ಹೀಗೆ ಏಳು ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವದು.

ಮೈಸೂರಿಗೆ ಬಂಪರ್‌

ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ. ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೆ.ಚಿತ್ರನಗರಿ ನಿರ್ಮಾಣ.ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಘೋಷಿಸಿದ್ದಾರೆ.

ಬೆಂಗಳೂರಲ್ಲಿ ಕ್ರೀಡಾ ಸಂಗ್ರಹಾಲಯ

ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಐದು ಕೋಟಿ ರೂ. ಅನುದಾನ, ಬಾಸ್ಕೆಟ್‌ಬಾಲ್‌ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್‌ ವೇಲೋಡ್ರೋಮ್‌ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ. ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯ. ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಅಭಿವೃದ್ಧಿ. ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌ನಲ್ಲಿ ಅತ್ಯಾಧುನಿಕ ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರ ಸ್ಥಾಪನೆ. ಬೆಂಗಳೂರಿನಲ್ಲಿ ಪ್ರವಾಹ ನಿಯಂತ್ರಣ ಹಾಗೂ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ಭೂಕುಸಿತದ ಅಪಾಯ ತಗ್ಗಿಸುವಿಕೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಬಲವರ್ಧನೆ ಮುಂತಾದ ವಿಪತ್ತು ಪರಿಹಾರ ಕಾರ್ಯಕ್ರಮಕ್ಕೆ 721 ಕೋಟಿ ರೂ.ಗಳ ವೆಚ್ಚ.

ಬೀದರ್‌, ವಿಜಯಪುರ, ಬಾದಾಮಿ , ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿ ಮತ್ತು ವಿಜಯಪುರ ಆನಂದಮಹಲ್ ಕಟ್ಟಡ ವಸ್ತುಸಂಗ್ರಹಾಲಯವಾಗಿ ಪರಿವರ್ತನೆ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ 3ಡಿ ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆ.ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳ ಮೀಸಲು. ಕೊಪ್ಪಳದಲ್ಲಿ ಜಾನಪದ ಲೋಕ ಸ್ಥಾಪನೆ.  

ವಿಜಯಪುರ ನಿಲ್ದಾಣ ಈ ವರ್ಷವೇ ಪೂರ್ಣ, ಕಾರ್ಯಾರಂಭ

ವಿಜಯಪುರ ಜಿಲ್ಲೆಯಲ್ಲಿ ಉತ್ಪಾದನಾ ಕ್ಲಸ್ಟರ್‌ ಮತ್ತು ದಕ್ಷಿಣ ಕನ್ನಡದಲ್ಲಿ ರಫ್ತು ಆಧಾರಿತ ಕೈಗಾರಿಕೆಗಳ ಕ್ಲಸ್ಟರ್‌ಗಳ ಅಭಿವೃದ್ದಿ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಬಹುಪಯೋಗಿ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿ. ಮಲ್ಪೆ, ಹೊನ್ನಾವರ, ಭಟ್ಕಳ, ಕುಂದಾಪುರ ಮತ್ತು ಬೇಲೆಕೇರಿ ಬಂದರುಗಳಲ್ಲಿ ಹೂಳೆತ್ತುವ ಕಾರ್ಯಕ್ರಮ. ಕಲಬುರಗಿಗೆ ಮಲ್ಟಿ ಸ್ಪೆಷಲ್‌ ಆಸ್ಪತ್ರೆ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಕ್ರಮ.

ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಾಣ.

 ಅಗ್ಗದ ದರದಲ್ಲಿ ಊಟ- ತಿಂಡಿ ಒದಗಿಸುವ ಇಂದಿರಾ ಕ್ಯಾಂಟೀನ್ ಯೋಜನೆಗೆ 100 ಕೋಟಿ

ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂಪಾಯಿ ಘೋಷಣೆ; ಇಂಧನ ಇಲಾಖೆ ಮೇಲೆ ಸಾಲದ ಹೊರೆ

ಮಹಿಳೆಯರಿಗೆ ಬಲ ತುಂಬಲಿದೆ ಉದ್ಯಮ ಶಕ್ತಿ; ಮಹಿಳಾ ಸ್ವಸಹಾಯ ಸಂಘದ ಪೆಟ್ರೋಲ್ ಬಂಕ್‌ಗೆ ನೀವೂ ಅಪ್ಲೈ ಮಾಡಬಹುದು