ನವದೆಹಲಿ: ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಖಡ್ಡಾಯವಾಗಿ ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ರಾಜಸ್ಥಾನ ಹೈಕೋರ್ಟನ ತೀರ್ಪನ್ನು ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ್ ಬೊಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ ತನ್ ತೀರ್ಪಿನಲ್ಲಿ ಭಾರತ ಸಂವಿಧಾನದ ವಿಧಿ 21 ಎ ಮತ್ತು 2009ರ ಶಿಕ್ಷಣ ಹಕ್ಕು ಕಾಯ್ದೆ ನಿಯಮಗಳ ಪ್ರಕಾರ 14 ವರ್ಷದೊಳಗಿನ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವು ಉಚಿತ ಹಾಗೂ ಕಡ್ಡಾಯ ಅಷ್ಟೇ ಅಲ್ಲ ಗುಣಮಟ್ಟದ ಶಿಕ್ಷಣ ಕೂಡ ನೀಡಬೇಕೆಂದು ಹೇಳುತ್ತದೆ.
ಬಿಎಡ್ ಪದವಿಧರರು ಪ್ರಾಥಮಿಕ ಶಾಲೆ (1 ರಿಂದ 5ನೇ ತರಗತಿ) ವಿದ್ಯಾರ್ಥಿಗಳಿಗೆ ಕಲಿಸಲು ಅಗತ್ಯ ಇರುವ ಬೇಸಿಕ್ ವಿಷಯ ಪಾಸು ಮಾಡಿರುವುದಿಲ್ಲ. ಹೀಗಾಗಿ ಭೋದನಾಶಾಸ್ತ್ರ ವಿಷಯದಲ್ಲಿ ಉತ್ತೀರ್ಣರಾಗಿಲ್ಲದ ಬಿಎಡ್ ಪದವಿಧರರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಪರಿಗಣಿಸುವಂತಿಲ್ಲಎಂದು ಸುಪ್ರೀಂ ಕೋರ್ಟ ಅಭಿಪ್ರಾಯಪಟ್ಟಿದೆ.
ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಬಿಎಡ್ ಅರ್ಹತೆ ನಿಗದಿ ಮಾಡಿ ಸರ್ಕಾರ ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದ ಬೋಧನಾ ಕೌಶಲ ಅತ್ಯಂತ ಮಹತ್ವದಾಗಿದೆ. ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಡಿಎಡ್ ಅರ್ಹತೆಯೇ ಹೊರತೂ ಬಿಎಡ್ ಅಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಹೇಳಿರುವುದಾಗಿ ಎಂದು ಪೀಠ ತಿಳಿಸಿದೆ.
ಬಿಎಡ್ ಕಡ್ಡಾಯ ಅಧಿಸೂಚನೆ ರದ್ದು ಮಾಡಿದ ಸುಪ್ರೀಂ ಕೋರ್ಟ್, ಶಿಕ್ಷಣ ಹಕ್ಕು ಕಾಯ್ದೆಗೂ ಸರ್ಕಾರದ ನಿರ್ಧಾರಕ್ಕೂ ಸಂಬಂಧವಿಲ್ಲ. ಪ್ರಾಥಮಿಕ ಶಾಲೆ ಶಿಕ್ಷಕರಾಗಲು ಅರ್ಹತೆಯಾಗಿ ಬಿಎಡ್ ನಿಗದಿ ಮಾಡಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ.