ಬೆಂಗಳೂರು :ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಡಾ.ರಜನೀಶ ಗೋಯಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
1986 ರ ಐಎಎಸ್ ಅಧಿಕಾರಿಯಾಗಿರುವ ರಜನೀಶ ಗೋಯಲ್ ಕರ್ನಾಟಕ ಸರಕಾರದ ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಅಧಿಕಾರಿಯಾಗಿ ಹೆಸರು ಮಾಡಿದ್ದರು. ಇದೀಗ ವಂದಿತಾ ಶರ್ಮಾ ಅವರಿಂದ ತೆರವಾಗಿರುವ ಮುಖ್ಯ ಕಾರ್ಯದರ್ಶಿ ಹುದ್ದೆಗೆ ರಜನೀಶ ಅವರನ್ನು ಸರಕಾರ ನೇಮಕ ಮಾಡಿದೆ.
ರಜನೀಶ ಅವರು ಡಿಸೆಂಬರ್ 1 ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಮುಂದಿನ ವರ್ಷದ ಜುಲೈಯಲ್ಲಿ ಅವರು ನಿವೃತ್ತರಾಗಲಿದ್ದಾರೆ.
ಮಂಗಳವಾರ ರಾಜ್ಯಪಾಲರು ಈ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ರಜನೀಶ್ ಗೋಯಲ್ ಅವರು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.
ಸದ್ಯ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರ ಕಾರ್ಯಾವಧಿ ಇದೇ ನವೆಂಬರ್ 30ಕ್ಕೆ ಕೊನೆಗೊಳ್ಳುತ್ತಿರುವುದರಿಂದ ಹೊಸ ಮುಖ್ಯ ಕಾರ್ಯದರ್ಶಿಯ ನೇಮಕವಾಗಿದೆ.