ಬೆಳಗಾವಿ : ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನಾ ಸ್ಥಳಕ್ಕೆ ಪೊಲೀಸ ಅಧಿಕಾರಿಗಳು ತೆರಳಿ ಸಮಗ್ರ ಮಾಹಿತಿ ಪಡೆಯಲು ತಿಳಿಸಲಾಗಿದ್ದು,ಘಟನಾ ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡುವದಲ್ಲದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯನ್ನು ಭೇಟಿ ಮಾಡುತ್ತೇನೆ. ಈಗಾಗಲೇ ಏಳು ಜನರನ್ನು ಬಂಧಿಸಿದ್ದು ಅವರನ್ನು ಕೋರ್ಟ್‌ ಗೆ ಹಾಜರು ಪಡಿಸುತ್ತೇವೆ. ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮಹಿಳೆಯನ್ನು ಅರೆಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿದ ಸುದ್ದಿ ತಿಳಿದ ತಕ್ಷಣ ಸಬ್ ಇನ್ಸೆಕ್ಟರ್ ಅವರು ಘಟನಾ ಸ್ಥಳಕ್ಕೆ ಹೋಗಿ ಆ ಮಹಿಳೆಗೆ ಬಟ್ಟೆ ಕೊಟ್ಟು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ತಿಳಿಸಿದರು.