ಬೆಳಗಾವಿ: ಬೆಳಗಾವಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದಾರೆ.
ಶಹಾಪುರದ ಲಕ್ಷ್ಮೀ ನಗರದ ನಿವಾಸಿ ಪರಶುರಾಮ ಈರಪ್ಪ ದಂಡಗಲ ( 32) ಬಂಧಿತನಾಗಿದ್ದಾನೆ. ಆತನಿಂದ ₹7 ಲಕ್ಷ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪಿಎಂಸಿ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ನೇತೃತ್ವದ ತಂಡ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಮನೆಗಳ್ಳತನ: ಆರೋಪಿ ಸೆರೆ, ₹7 ಲಕ್ಷದ ಚಿನ್ನಾಭರಣ ವಶ
