ಬೆಳಗಾವಿ :ಬೆಳಗಾವಿಯಲ್ಲಿ ಇದೀಗ ಒಬ್ಬರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ನಡೆಸಿದ ಕೊರೊನಾ ತಪಾಸಣೆ ವೇಳೆ ವ್ಯಕ್ತಿಯೋರ್ವರಿಗೆ ಕರೊನಾ ವೈರಸ್‌ ನಿಂದ ಬಳಲುತ್ತಿರುವದು ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಇದೀಗ 60 ವರ್ಷ ದಾಟಿದವರಿಗೆ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ.

ಬೆಳಗಾವಿ ಜಿಲ್ಲೆ ಗೋವಾ ಹಾಗೂ ಮಹಾರಾಷ್ಟ್ರ ಗಡಿಯನ್ನು ಹಂಚಿಕೊಂಡಿದೆ. ಈ ನಿಟ್ಟಿನಲ್ಲಿ ಕೊರೊನಾ ಬಗ್ಗೆ ಹೆಚ್ಚು ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತ ಮುಂದಾಗಿದೆ.

ಬೆಂಗಳುರು ವರದಿ: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ತಿಳಿಸಿದೆ. 

ಮೂವರು ಮೃತಪಟ್ಟಿರುವುದು ಬೆಂಗಳೂರಿನವರು. 64 ವರ್ಷ ವೃದ್ಧ, 44 ವರ್ಷದ ಹಾಗೂ 76 ವರ್ಷದ ವ್ಯಕ್ತಿಗಳು ಸೋಂಕಿಗೆ ಬಲಿಯಾಗಿದ್ದಾರೆ. ಬುಧವಾರ ಒಂದೇ ದಿನ 22 ಮಂದಿಗೆ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.47ರಷ್ಟಿದೆ.