ಬೆಳಗಾವಿ :ಸಿದ್ದರಾಮಯ್ಯ ಅವರಿಗೆ ಕಾನೂನಿನ ಮೇಲೆ ವಿಶ್ವಾಸ ಇಲ್ಲ. ಕಾನೂನು ಹೇಳಿದ್ದನ್ನು ಒಪ್ಪಿಕೊಳ್ಳುವ ಧಾವಂತ ಇಲ್ಲ. ಹೇಗಾದರೂ ಮಾಡಿ ಮುಸ್ಲಿಂ ಮತಗಳನ್ನು ತಮ್ಮತ್ತ ಸೆಳೆಯುವುದೇ ಅವರ ತಂತ್ರವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಮುಸ್ಲಿಂ ಪಾರ್ಟಿ ಆಗಿ ಮಾರ್ಪಟ್ಟಿದೆ ಎಂದುಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರಿಂದಿಲ್ಲಿ ಆರೋಪಿಸಿದರು.
ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು,
ಸಿಎಂ ಸಿದ್ದರಾಮಯ್ಯ ಹಿಜಾಬ್ ಕುರಿತು ನೀಡಿದ ಹೇಳಿಕೆಗೆ ತೀವ್ರವಾಗಿ ಕಿಡಿ ಕಾರಿದ ಅವರು,
ಶಾಲಾ-ಕಾಲೇಜುಗಳಲ್ಲಿ ಮತ್ತೆ ಹಿಜಾಬ್‌ಗೆ ಅವಕಾಶ ನೀಡುವದು ಖಂಡನೀಯ. ಕಾಂಗ್ರೆಸ್
ಅಧಿಕಾರಕ್ಕೆ ಬಂದ ನಂತರ ಇದಕ್ಕಿಂತ ಭಿನ್ನ ನಿರೀಕ್ಷೆ ನಮಗಿರಲಿಲ್ಲ. ಕಾಂಗ್ರೆಸ್ ಮುಸ್ಲಿಂ ಪಾರ್ಟಿ ಆಗಿದೆ.
ಶಿಕ್ಷಣ ನೀತಿಯಲ್ಲಿ ಸಮಾನತೆ ಇರಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ಸರ್ಕಾರವಿದ್ದಾಗ ವಸ್ತ್ರ ಸಂಹಿತೆಯನ್ನು ಜಾರಿ ಮಾಡಲಾಗಿತ್ತು. ಹಿಜಾಬ್ ಹಾಕಿಕೊಂಡು ತಿರುಗುವುದನ್ನು ಪಿಎಫ್ಐನವರು ಮಾಡಿದರು. ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಪಿಎಫ್‌ಐನವರ ಕೇಸ್‌ಗಳನ್ನು ತೆರವು ಮಾಡುವ ಮೂಲಕ ಅವರ ಬೆಂಬಲಿಗರಂತೆ ವರ್ತಿಸಿದ್ದರು. ಈಗ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ ಹಿಜಾಬ್ ನಿಷೇಧವನ್ನು ತೆರವು ಮಾಡಿದ್ದಾರೆ. ಇದು ಬಹಳ ದುರಂತಕಾರಿ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು.