ಬೆಳಗಾವಿ: ಬೆಳಗಾವಿ ವಿಮಾನ ನಿಲ್ದಾಣದಿಂದ ನವೆಂಬರ್ ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 9.47ರಷ್ಟು ಏರಿಕೆ ಕಂಡಿದೆ. ಬೆಂಗಳೂರು ಹಾಗೂ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಬೆಳಗಾವಿ ಸ್ಥಾನ ಪಡೆದಿದೆ. ರದ್ದಾಗಿದ್ದ ದೆಹಲಿ ಹಾಗೂ ಬೆಂಗಳೂರು ವಿಮಾನಗಳನ್ನು ಮತ್ತೆ ಆರಂಭಿಸಿದ್ದೇ ಪ್ರಯಾಣಿಕರ ಸಂಖ್ಯೆ ಹೆಚ್ಚಲು ಕಾರಣ.
ಧೇಶಇಯ ವಿಮಾನ ಸಂಚಾರ ಹಾಗೂ ಪ್ರಯಾಣಿಕರ ಸಂಖ್ಯೆಯಲ್ಲಿ ಈಗ ಬೆಳಗಾವಿ ನಂ 1 ಆಗಿ ಮಾರ್ಪಟ್ಟಿದೆ. ಕಳೆದ ಅಕ್ಟೋಬರ ತಿಂಗಳು ಕೆಲ ವಿಮಾನಗಳು ರದ್ದಾದ ಪರಿಣಾಮ ಸಹಜವಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿತ್ತು. ‘ಬೆಳಗಾವಿ ವಿಮಾನ ನಿಲ್ದಾಣದಿಂದ ಕಳೆದ ತಿಂಗಳಲ್ಲಿ 531 ಬಾರಿ ವಿಮಾನಗಳು ಹಾರಾಟ ನಡೆಸಿದ್ದು, 32,059 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಬೆಳಗಾವಿಯೇ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಹೇಳಲು ಆಗುವುದಿಲ್ಲ. ಸದ್ಯಕ್ಕೆ ಹುಬ್ಬಳ್ಳಿ ಹಿಂದಿಕ್ಕಿದೆ. ಪ್ರತಿ ತಿಂಗಳು ವ್ಯತ್ಯಾಸ ಆಗುತ್ತಿರುತ್ತದೆ’ ಎಂದು ವಿಮಾನ ನಿಲ್ದಾಣದ ನಿರ್ದೇಶಕ ತ್ಯಾಗರಾಜನ್ ಅವರು ತಿಳಿಸಿದ್ದಾರೆ.
‘ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆದಿದೆ. ದೇಶದ ಬೇರೆಬೇರೆ ಕಡೆಗೆ ಪ್ರವಾಸಕ್ಕೆ ತೆರಳುವವರ ಸಂಖ್ಯೆಯೂ ಹೆಚ್ಚಿದೆ. 2024ರಿಂದ ಬೆಂಗಳೂರಿಗೆ ಮಧ್ಯಾಹ್ನದ ಸಮಯಕ್ಕೆ ಇನ್ನೊಂದು ವಿಮಾನ ಹಾರಾಟ ಆರಂಭವಾಗಲಿದೆ. ಹೀಗಾಗಿ, ಮುಂದಿನ ತಿಂಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದವರ ಸಂಖ್ಯೆ ಇನ್ನೂ ಹೆಚ್ಚುವ ನಿರೀಕ್ಷೆ ಇದೆ’ ಎಂದೂ ಅವರು ಹೇಳಿದರು.
