ಚನ್ನಮ್ಮನ ಕಿತ್ತೂರು: ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಕಿತ್ತೂರು– ಬೀಡಿ ರಸ್ತೆಯ ಫಾರೆಸ್ಟ್ ನಾಕಾ ಬಳಿ ಇಂದು ನಡೆದಿದೆ.
ಚನ್ನಮ್ಮನ ಕಿತ್ತೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ 3 ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ದೇಗಾಂವ ಗ್ರಾಮದ ಕಾವೇರಿ ಬಸಪ್ಪ ಕಾಜಗಾರ (20) ಮೃತ ವಿದ್ಯಾರ್ಥಿನಿ.
ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಏಕಾಏಕಿ ಬಂದ ಟಂಟಂ ವಾಹನ ವಿದ್ಯಾರ್ಥಿನಿ ಮೇಲೆಯೇ ಹರಿಯಿತು. ತೀವ್ರ ಗಾಯಗೊಂಡ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ಖಚಿತಪಡಿಸಿದರು.
ಸ್ಥಳಕ್ಕೆ ಧಾವಿಸಿದ ಪೊಲೀಸರು ಜನರನ್ನು ಚದುರಿಸಿ, ಅಪಘಾತಕ್ಕೆ ಕಾರಣನಾದ ಅನಿಲ ಚಿವಟಗುಂಡಿ ಎಂಬ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.