ಬೆಂಗಳೂರು: ರಾಜ್ಯದಲ್ಲಿರುವ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್-ಎಚ್.ಎಸ್.ಆರ್.ಪಿ) ಅಳವಡಿಕೆಗೆ ನಿಗದಿಪಡಿಸಿರುವ ಗಡುವನ್ನು ಮೂರು ತಿಂಗಳವರೆಗೆ ವಿಸ್ತರಿಸಲು ನಿರ್ಧರಿಸಿದ್ದು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರುಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸುವಲ್ಲಿ ಆಗುತ್ತಿರುವ ವಿಳಂಬದ ಕುರಿತು ಕಳವಳ ವ್ಯಕ್ತಪಡಿಸಿರುವ ಸಚಿವ ರಾಮಲಿಂಗಾರೆಡ್ಡಿ ಅವರು, ಹೊಸ ನಂಬರ ಪ್ಲೃಟ ಅಳವಡಿಸಿಕೊಳ್ಳಲು ಮತ್ತೆ ಮೂರು ತಿಂಗಳ ಗಡುವು ವಿಸ್ತರಣೆ ಮಾಡಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ತೀವ್ರ ನಿಧಾನಗತಿಯಿಂದಾಗಿ ಹಿನ್ನಡೆ ಅನುಭವಿಸುವಂತಾಗಿದೆ ಎಂದರು.
2019 ರ ಏ.1ಕ್ಕೂ ಮುನ್ನ ನೋಂದಣಿಯಾದ ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು 18 ಆಗಷ್ಟ 2023 ರಂದು ಅಧಿಸೂಚನೆ ಹೊರಡಿಸಿದ್ದ ಸಾರಿಗೆ ಇಲಾಖೆ ರಾಜ್ಯದಲ್ಲಿ ನ.17ರವರೆಗೆ ಕಾಲಾವಕಾಶ ನೀಡಿತ್ತು. ಆದರೆ ನಿಗಧಿತ ಗುರಿ ಮುಟ್ಟಲು ಸಾಧ್ಯವಾಗಿರಲಿಲ್ಲ. 2 ಕೋಟಿ ಹಳೆ ವಾಹನಗಳು ರಾಜ್ಯದಲ್ಲಿವೆ. ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯ ಅಳವಡಿಸಿಕೊಳ್ಳಬಹುದೆಂದು ಇಲಾಖೆ ನಿರೀಕ್ಷಿಸಿತ್ತು. ಆದರೆ, ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಜನರಿಂದ ನಿರೀಕ್ಷಿತ ಸ್ಪಂದನೆ ಸಿಗಲಿಲ್ಲ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಫೆ.17ರವರೆಗೆ ಗಡುವು ವಿಸ್ತರಿಸುವಂತೆ ಸೂಚಿಸಿದ್ದರು.
ಅದರಂತೆ ಸಾರಿಗೆ ಇಲಾಖೆ ಫೆ.17 ರವರೆಗೆ ಗಡುವು ವಿಸ್ತರಿಸಿತ್ತು. ಆ ನಂತರವೂ ಸಾರ್ವಜನಿಕರು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಹಿಂದೇಟು ಹಾಕಿದ್ದು, 2 ಕೋಟಿ ಹಳೆ ವಾಹನಗಳಲ್ಲಿ ಈವರೆಗೆ ಸುಮಾರು 18.5 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆಯಾಗಿದೆ. ಮತ್ತೊಂದೆಡೆ ಎಚ್.ಎಸ್ ಆರ್‌ಪಿ ಅಳವಡಿಕೆಗಾಗಿ ವೆಬ್ ಪೋರ್ಟಲ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಆನ್‌ಲೈನ್ ನೋಂದಣಿ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಈ ಕಾರಣಕ್ಕೆ ಮತ್ತೊಮ್ಮೆ ಎಚ್.ಎಸ್.ಆರ್.ಪಿ ಅಳವಡಿಕೆಗೆ ಗಡುವು ವಿಸ್ತರಿಸುವಂತೆ ಸಾರ್ವಜನಿಕರು ಹಾಗೂ ಕರ್ನಾಟಕ ರಾಜ್ಯ ಟ್ರಾವೆಲ್ಸ್ ಮಾಲೀಕರ ಸಂಘದ ಸದಸ್ಯರು ಸರಕಾರಕ್ಕೆ ಮನವಿ ಮಾಡಿದ್ದರು.
ಈ ಮನವಿಗೆ ಪೂರಕವಾಗಿ ಸ್ಪಂದಿಸಿರುವ ಸರಕಾರ ಸಾರ್ವಜನಿಕರ ಅನುಕೂಲಕ್ಕಾಗಿ ಗಡುವು ವಿಸ್ತರಿಸಿದೆ. ಈ ಮೊದಲು ಫೆ.17 ರ ಗಡುವಿನೊಳಗೆ ಎಚ್.ಎಸ್‌ಆರ್‌ಪಿ ಅಳವಡಿಸದ ವಾಹನಗಳಿಗೆ 1 ಸಾವಿರ ರೂ. ದಂಡ ವಿಧಿ ಸುವುದಾಗಿ ಎಚ್ಚರಿಕೆ ನೀಡಲಾಗಿತ್ತು.
