ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನವನ್ನು ಆಡಳಿತಾರೂಡ ಬಿಜೆಪಿಯ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಮಹಾಪೌರರಾಗಿ ಸವಿತಾ ಕಾಂಬಳೆ ಅವರು ಆಯ್ಕೆಯಾದರೆ, ಉಪ ಮೇಯರ್ ಸ್ಥಾನಕ್ಕೆ ಆನಂದ ಚೌಹಾನ್ ಆಯ್ಕೆಯಾಗಿದ್ದಾರೆ.
ಬೆಳಗಾವಿ ಪಾಲಿಕೆ ಇತಿಹಾಸದಲ್ಲಿ ಪ್ರಥಮ ಬಾರಿಗೆ ಬಹುಮತ ಪಡೆದ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.
ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಪಾಳೆಯ ಸಂತಸ ಹಂಚಿಕೊಂಡಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಳಾ ಅಂಗಡಿ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ಅನಿಲ್ ಬೆನಕೆ ಸೇರಿದಂತೆ ಪಕ್ಷದ ಸದಸ್ಯರು ಶುಭಾಶಯ ತಿಳಿಸಿದ್ದಾರೆ.