ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ರಾಜ್ಯ ಬಜೆಟನಲ್ಲಿ ಘೋಷಿಸಿದಂತೆ ಬೆಳಗಾವಿ ನಗರ ಸೇರಿದಂತೆ ರಾಜ್ಯದ 10 ನಗರಗಳಲ್ಲಿ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಮದ್ಯರಾತ್ರಿ 1 ಗಂಟೆಯವರೆಗೆ ವ್ಯಾಪರ ವಹಹಿವಾಟು ನಡೆಸುತ್ತವೆ.

ತಕ್ಷಣವೇ ಜಾರಿಗೆ ಬರುವಂತೆ, ಬೃಹತ ಬೆಂಗಳೂರು ಮಹಾನಗರ ಸೇರಿದಂತೆ ಮಹಾನಗರ ಪಾಲಿಕೆ ವಾಪ್ತಿಗೊಳ್ಪಡುವ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳನ್ನು ಉತ್ತೇಜಿಸಲು ಈಗಿರುವ ರಾತ್ರಿ 10 ಅಥವಾ 11 ಗಂಟೆ ಬದಲಾಗಿ ಮದ್ಯರಾತ್ರಿ 1 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾಜ್ಯದ 10 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಗೆ ಬರಲಿದೆ. ಈ ಮೊದಲಿದ್ದ ನಿರ್ಭಂದಗಳನ್ನು ತೆಗೆಯಲಾಗುತ್ತದೆ.

ಬೆಳಗಾವಿಯಲ್ಲಿ ನಗರದಲ್ಲಿ ಈಗಾಗಲೇ ರಾತ್ರಿ 9:30ರವರೆಗೆ ಅಂಗಡಿಗಳು ತೆರೆದರೆ ಹೋಟೆಲ್‌ಗಳು ರಾತ್ರಿ 10:30 ಗ್ರಾಹಕರಿಗೆ ಸೇವೆ ನೀಡುತ್ತಿದ್ದವು. ಹೊಸ ನಿಯಮದ ಪ್ರಕಾರ ರಾತ್ರಿ 1 ಗಂಟೆಯವರೆಗೆ ವ್ಯಾಪರ ನಡೆಸಲು ಪೊಲೀಸರು ಅನುಮತಿ ನೀಡಿದರೆ ಗ್ರಾಹಕರಿಗೆ ಇನ್ನೂ ಹೆಚ್ಚಿನ ಸೇವೆ ನೀಡಲು ಅನುಕೂಲವಾಗುತ್ತದೆ. ಆದರೆ ಪೊಲೀಸರು ರಾತ್ರಿ 11 ಗಂಟೆಗೆ ಅಂಗಡಿ, ಹೊಟೆಲಗಳನ್ನು ಮುಚ್ಚುವಂತೆ ಬೈಕಗಳಲ್ಲಿ ಗಸ್ತು ತಿರುಗುತ್ತ ಹೇಳುತ್ತಿದ್ದಾರೆ,

ಬೆಂಗಳೂರಿನ ಜೊತೆಗೆ ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ ಸೇರಿದಂತೆ ಮಹಾನಗರ ಪಾಲಿಕೆಗಳಿಗೆ ಈ ವಿಸ್ತೃತ ಸಮಯವು ಅನ್ವಯಿಸುತ್ತದೆ. ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುವುದು ಮತ್ತು ಈ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ವ್ಯವಹಾರಗಳಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಇದರ ಉದ್ದೇಶವಾಗಿದೆ.