ಬೆಳಗಾವಿ: ಬೆಳಗಾವಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ಜತ್ತ-ಜಾಬೋಂಟಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು.ಬೆಳಗಾವಿ ವಿಮಾನ ನಿಲ್ದಾಣದಿಂದ ಸಿಟಿ ಬಸ್ ನಿಲ್ದಾಣದವೆರೆಗೆ ಮೇಲ್ಸೇತುವೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು. ಯಳ್ಳೂರು ಗ್ರಾಮದಿಂದ ರಾಜಹಂಸಗಡವರೆಗೆ ಅಟಲ್ ಬಿಹಾರಿ ವಾಜಪೇಯಿ ಕೇಬಲ್ ಕಾರ್ ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕು ಹಾಗೂ ಸಂಕೇಶ್ವರದಿಂದ (ಎಸ್.ಎಚ್ 48) ದಿಂದ ನರಗುಂದವರೆಗೆ (ಎಸ್.ಎಚ್ 45) ವ್ಹಾಯಾ ಹುಕ್ಕೇರಿ, ಗೋಕಾಕ, ಯರಗಟ್ಟಿ ಮುನವಳ್ಳಿ ಮಾರ್ಗವಾಗಿ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸಬೇಕೆಂದು ಒತ್ತಾಯಿಸಿದರು.
ಸಚಿವರು ಸಂಸದರ ಮನವಿಗೆ ಸಕಾರಾತ್ಮಕಾಗಿ ಸ್ಪಂದಿಸಿದ್ದು, ಪ್ರಸ್ತಾವನೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.