ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರು ಸೋಮವಾರ(ಏ.15) ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಬಾಗಣ್ಣ ನರೋಟಿ ಉಪಸ್ಥಿತರಿದ್ದರು.