ಬೆಳಗಾವಿ : ಪ್ರತಿ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಾರೆ. ಈ ಸಲವು ಅವರ ಆಗಮನವಾಗುತ್ತಿದ್ದು, ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಈ ಬಾರಿ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಗೆಲವು ಸಾಧಿಸಿತ್ತು. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಸುಭದ್ರಗೊಳಿಸಲು ಪ್ರಧಾನಿ ಮೋದಿ ಕಹಳೆಯೂದಲಿದ್ದಾರೆ.
ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಕಾಲ 12 ಕ್ಷೇತ್ರಗಳನ್ನು ಗುರಿ ಮಾಡಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ.
ಈ ಬಾರಿ ಪ್ರಧಾನಿ ಮೋದಿ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, 6 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಪ್ರಧಾನಿ ಮೋದಿ ಸಮಾವೇಶಕ್ಕೆ ಈಗಾಗಲೇ ವೇದಿಕೆಗಳು ಸಜ್ಜಾಗುತ್ತಿವೆ.
ದೇಶ್ಯಾದ್ಯಂತ ಪ್ರಚಾರ ಸಭೆಗಳನ್ನು ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎಪ್ರಿಲ್ 28 ಹಾಗೂ 29 ರಂದು ಎರಡು ದಿನ, 12 ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.
ಎಪ್ರಿಲ್ 28 ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.
ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ
