ಬೆಳಗಾವಿ,: ಲೋಕಸಭಾ ಕ್ಷೇತ್ರಗಳ ಅಡಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ) ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಿ ಚುನಾವಣಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.
ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ, ವ್ಯಾಪಾರ ಉದ್ಯಮಗಳು ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅಧಿಕಾರಿ/ಸಿಬ್ಬಂದಿಗಳು ಅಥವಾ ದಿನಗೂಲಿ ವೇತನದಲ್ಲಿ ಕೆಲಸ ಮಾಡುವ ಮತದಾರರು ತಮ್ಮ ಮತ ಚಲಾಯಿಸಲು ಅನುವು ಮಾಡಿಕೊಡಲು ಆರ್ಪಿ ಕಾಯ್ದೆ 1951 ರ ಸೆಕ್ಷನ್ 135 ಬಿ ಪ್ರಕಾರ ಪಾವತಿಸಿದ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ.
ಕಾನೂನುಬಾಹಿರ ಸಭೆಗಳನ್ನು ನಿಷೇಧಿಸಲಾಗಿದೆ ಮತ್ತು ಮತದಾನದ ಮುಕ್ತಾಯಕ್ಕೆ ನಿಗದಿಪಡಿಸಿದ ಗಂಟೆಯೊಂದಿಗೆ ಕೊನೆಗೊಳ್ಳುವ ಮುಂಚಿನ 48 ಗಂಟೆಗಳ ಅವಧಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸುವ ಬಗ್ಗೆ ಆದೇಶಗಳನ್ನು ನೀಡಲಾಗಿದೆ. ಇದು ಚುನಾವಣೆ ನಡೆಯುವ ಪ್ರದೇಶ/ಸಂಪೂರ್ಣ ಕ್ಷೇತ್ರಕ, ಅನ್ವಯಿಸುತ್ತದೆ.