ಅನಾರೋಗ್ಮಾಯದಿಂದ ನಿಧನರಾದ ಮಾಜಿ ಸಚಿವ ಡಿ ಬಿ ಇನಾಮದಾರ ಅವರ ಅಂತಿಮ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮನ ಸಲ್ಲಿಸಿ ಮಾತನಾಡಿದ ಅವರು, ನನಗಿಂತ ವಯಸ್ಸಿನಲ್ಲಿ ಕಿರಿಯರು, ಅತ್ಯಂತ ಉತ್ಸಾಯಿ ಹಾಗೂ ಚಟುವಟಿಕೆಯಿಂದ ಇರುವಂತ ವ್ಯಕ್ತಿ ಅಚಾನಕ್ಕಾಗಿ ಅನಾರೋಗ್ಯಕ್ಕೆ ತುತ್ತಾಗಿರುವದು ನನಗೂ ಶಾಕ್ ಆಗಿದೆ. ಕಿತ್ತೂರಿನ ಧಣಿ ಎಂದೇ ಗುರುತಿಸಿಕೊಂಡಿದ್ದ ಅವರು ಅತ್ಯಂತ ಪ್ರಾಮಾಣಿಕ ಹಾಗೂ ದಕ್ಷ ವ್ಯಕ್ತಿಯಾಗಿದ್ದರು. ಅವರ ಸಾವು ನನಗೆ ಧಿಗ್ರಭಮೆಯನ್ನುಂಟು ಮಾಡಿದೆ. ಪ್ರತಿದಿನ ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಆರೋಗ್ಯದ ಕುರಿತು ಮಾಹಿತಿ ಪಡೆದು, ಗುಣಮಟ್ಟದ ಚಿಕಿತ್ಸೆ ನೀಡಿ ಅವರಿಗೇ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದಿದ್ದೆ. ಆದರೆ ಪರಿಸ್ಥಿತಿ ಕೈಮೀರಿ ಹೋಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ ಕೋರೆ, ಮಾಜಿ ಸಚಿವರಾದ ಹೆಚ್ ಕೆ ಪಾಟೀಲ, ಕಾರಂಜಿ ಮಠದ ಶ್ರೀ ಗುರುಸಿದ್ದ ಮಹಾಸ್ವಾಮಿಜಿ ಸೇರಿದಂತೆ ಮುಂತಾದವರು ಅಂತಿಮ ದರ್ಶನ ಪಡೆದರು.