ಬೆಳಗಾವಿ: ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಪ್ರಕಟಗೊಂಡಿದೆ. ಚಿಕ್ಕೋಡಿ ಮತ್ತು ಬೆಳಗಾವಿ ಶೈಕ್ಷಣಿಕ ಜಿಲ್ಲೆಗಳು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಸ್ಥಾನ ಇಂತಿದೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 25ನೇ ಸ್ಥಾನ ಗಳಿಸಿದರೆ, ಬೆಳಗಾವಿ ಶೈಕ್ಷಣಿಕ ಜಿಲ್ಲೆ 29 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಕಳೆದ ಬಾರಿ ಚಿಕ್ಕೋಡಿ 13 ನೇ ಸ್ಥಾನದಲ್ಲಿದ್ದರೆ ಬೆಳಗಾವಿ 26ನೇ ಸ್ಥಾನದಲ್ಲಿತ್ತು.

ರಾಜ್ಯಕ್ಕೆ ಎರಡನೇ ರ್ಯಾಂಕ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ವಿದ್ಯಾರ್ಥಿ ಸಿದ್ದಾಂತ ನಾಯಿಕಬಾ ಗಡಗೆ ಅವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 624 ಅಂಕಗಳನ್ನು ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾನೆ.

ಇಂಗ್ಲಿಷ್ ಭಾಷೆ ಹೊರತುಪಡಿಸಿ, ಎಲ್ಲ  ವಿಷಯಗಳಿಗೆ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.