ಬೆಳಗಾವಿ,: ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಸುಳಗಾ ಗ್ರಾಮದಲ್ಲಿಂದು ಬೆಳಗ್ಗೆ ನಡೆದಿದೆ.
ಗ್ಯಾಸ್ ಸಿಲಿಂಡರ್ ಸ್ಪೋಟ್ ದಿಂದ ಮನೆಯಲ್ಲಿದ್ದ ಕಲ್ಲಪ್ಪ ಪಾಟೀಲ್ (62) ಸುಮನ್ ಪಾಟೀಲ್(60) ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿದ್ದು, ಕಲ್ಲಪ್ಪ ಹಾಗೂ ಸುಮನ್ ಶೇ. 70 ರಷ್ಟು ಸುಟ್ಟ ಗಾಯವಾಗಿವೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗ್ಗೆ 4 ಗಂಟೆಗೆ ಲೈಟ್ ಸ್ವಿಚ್ ಆನ್ ಮಾಡುತ್ತಿದ್ದಂತೆ ಸಿಲಿಂಡರ ಬ್ಲಾಸ್ಟ್ ಆಗಿದೆ ಎಂದು ಮೂಲಗಳು ತಿಳಿಸಿವೆ.
ಮನೆಯ ತುಂಬ ಚಲ್ಲಾಪಿಲ್ಲಿಯಾಗಿ ಬಿದ್ದಿರೋ ಟ್ರಜರಿ,ವಸ್ತ್ರ ದವಸ ಧಾನ್ಯಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.