ಬೆಳಗಾವಿ,: ಕ್ರಿಕೆಟ್ ಜಗಳ ವಿಕೋಪಕ್ಕೆ ತೆರಳಿ ಎರಡು ಗುಂಪುಗಳ ನಡುವೆ ಬಡಿದಾಟ ನಡೆದು, ಕಲ್ಲು ತೂರಾಟ ನಡೆದ ಘಟನೆ ಶಹಾಪುರದ ಅಳವಣ ಗಲ್ಲಿಯಲ್ಲಿ ಗುರುವಾರ ನಡೆದಿದೆ.
ಗಲ್ಲಿ ಕ್ರಿಕೆಟ್ ನಲ್ಲಿ ಮಕ್ಕಳ ನಡುವಿನ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಕಲ್ಲು ತೂರಾಟ ನಡೆದಿದೆ.

ಕ್ರಿಕೆಟ್ ಆಡುವಾಗ ಸಣ್ಣ ಗಲಾಟೆ ಆಗಿದೆ. ಅದಾದ ಬಳಿಕ ಎಲ್ಲರೂ ಮನೆಗೆ ತೆರಳಿದ್ದಾರೆ. ಇದಾದ ಬಳಿಕ ಸ್ವಲ್ಪ ಜಗಳ ಆಗಿದೆ. ತಕ್ಷಣ ನಮ್ಮ ಪೊಲೀಸರು ಸ್ಥಳಕ್ಕೆ ತೆರಳಿ ಕಾನೂನು ಸುವ್ಯವಸ್ಥೆ ಹತೋಟಿಗೆ ತಂದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು.
ಗುರುವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದರು. 8 ಜನರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದರು.
ಈಗ ದೂರ ದಾಖಲಾಗುತ್ತಿದೆ. ನಮ್ಮ ತನಿಖೆಯಲ್ಲಿ ಸಿಸಿ ಟಿವಿ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದೆ. ಅದನ್ನು ನಾವು ನಿಭಾಯಿಸುತ್ತಿದ್ದೇವೆ ಎಂದರು.