ಬೆಳಗಾವಿ,: ಬೆಳಗಾವಿಯ ಕೆಎಲ್‍ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ್ ರಿಸರ್ಚ್ (ಕಾಹೆರ)ನ 14ನೇ ಘಟಿಕೋತ್ಸವವು ಇದೇ  ಸೋಮವಾರ ದಿ. 27 ಮೇ 2024ರಂದು ಬೆಳಗ್ಗೆ 11.00 ಗಂಟೆಗೆ ಜೆಎನ್‍ಎಂಸಿ ಆವರಣದಲ್ಲಿರುವ ಕೆಎಲ್‍ಇ ಸೆಂಟಿನರಿ ಕನ್ವೇನ್ಶನ್‌ ಸೆಂಟರದಲ್ಲಿ ಜರುಗಲಿದ್ದು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಅವರಿಂದಿಲ್ಲಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿಂದು ಭೆಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದು, ಪ್ರಥಮ ಬಾರಿಗೆ ವಿಶ್ವವಿದ್ಯಾಲಯವು ಅಮೇರಿಕಾದ ಫಿಲ್ಡೇಲ್ಫಿಯಾದ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯದ ವೈಸ್ ಪ್ರೊವೊಸ್ಟ್ ಡಾ.ರಿರ್ಚಡ್ ಜಾಕೋಬ್ ಡೆರ್ಮನ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 1739 ವೈದ್ಯಕೀಯ ವಿವಿಧ ಕೋರ್ಸುಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಅದರಲ್ಲಿ 45 ಚಿನ್ನದ ಪದಕ ವಿಜೇತರಿದ್ದಾರೆ. 30 ಪಿಎಚ್.ಡಿ. ಪದವೀಧರರು, 13 ಪೋಸ್ಟ್ ಡಾಕ್ಟರಲ್(ಡಿಎಮ್/ಎಂ.ಸಿಎಚ್) 644 ಪೋಸ್ಟ್ ಡಾಕ್ಟರೇಟ್ಸ್, 1023 ಅಂಡರ್ ಗ್ರ್ಯಾಜುಯೆಟ್ಸ್, ಪೋಸ್ಟ್ ಗ್ರ್ಯಾಜುಯೆಟ್ ಡಿಪ್ಲೋಮಾ, 4 ಡಿಪ್ಲೋಮಾ, 5 ಫೆಲೋಶಿಫ್, 11 ಸರ್ಟಿಫೀಕೆಟ್ ಕೋರ್ಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ವಿವರಿಸಿದರು.

ವಿಶ್ವವಿದ್ಯಾಲಯವು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (ಓಂಂಅ) ಯಿಂದ 3ನೇ ಬಾರಿಗೆ, 3.39 ನೊಂದಿಗೆ’ ಎ+ ಗ್ರೇಡ್‍ನೊಂದಿಗೆ ಮರುಮಾನ್ಯತೆ ಪಡೆದಿದೆ. ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ‘ಎ’ ವರ್ಗದಲ್ಲಿ ಹೊಂದಿದೆ. ಕಾಹೆರ್‍ಗೆ ಧನಸಹಾಯ ಆಯೋಗ(UGC)ವು 12 ಸ್ಥಾನಮಾನವನ್ನು ನೀಡಿದೆ. ಇದು ವಿಶ್ವವಿದ್ಯಾಲಯದ ಉನ್ನತ ಗುಣಮಟ್ಟದ ಶಿಕ್ಷಣ ಮತ್ತು ಸಂಶೋಧನೆಗಳನ್ನು ಗುರುತಿಸಿ ನೀಡಿದ ಸ್ಥಾನಮಾನವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಹೆರ್‍ನ ಉಪಕುಲಪತಿಗಳಾದ ಡಾ.ನೀತಿನ್ ಗಂಗಾನೆ, ಕುಲಸಚಿವರಾದ ಡಾ. ಎಂ.ಎಸ್.ಗಣಾಚಾರಿ, ಡಾ.ತೇಜಸ್ವಿ ಪ್ರಧಾನ, ಜೆಎನ್‍ಎಂಸಿ ಪ್ರಾಚಾರ್ಯ ಡಾ.ಎನ್‍ಎಸ್ ಮಹಾಂತಶೆಟ್ಟಿ, ಡಾ.ರಾಜೇಶ ಪವಾರ, ಡಾ.ವಿಶ್ವನಾಥ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.