ಬೆಳಗಾವಿ : ಹಿಂಡಲಗಾ ಜೈಲಿನಲ್ಲಿದ್ದ ಕೈದಿಯನ್ನು ವಿಚಾರಣೆಗೆ ಕೋರ್ಟಗೆ ಕರೆತಂದಾಗ ಓಪನ್ ಕೋರ್ಟ್ ನಲ್ಲಿ ಇಂದು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.

ಈ ಸಂದರ್ಭದಲ್ಲಿ ವಕೀಲರು ಹಾಗೂ ಕೋರ್ಟಿನಲ್ಲಿದ್ದ ಸಾರ್ವಜನಿಕರು ಘೋಷಣೆ ಕೂಗಿದ ಆರೋಪಿಗೆ ಧರ್ಮದೇಟು ನೀಡಿದ ಘಟನೆ ನಡೆದಿದೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಜೀವ ಬೆದರಿಕೆ ಹಾಕಿದ್ದ ಜಯೇಶ್ ಪೂಜಾರಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವನು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಏಕಾಏಕಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.

ನಿತೀನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕುಮಾರ್, ಗೆ ಜೀವ ಬೇದರಿಕೆ ಹಾಕಿದ್ದ ಆರೋಪದಲ್ಲಿ ವಿಚಾರಣೆಗೆ ಬಂದಿದ್ದ ಆರೋಪಿ ಜಯೇಶ್ ಪೂಜಾರಿ