ಬೆಳಗಾವಿ: ಗೋವಾ ಗಡಿಯಲ್ಲಿರುವ ಸೂರಲ್ ಜಲಪಾತ ವೀಕ್ಷಣೆಗೆ ಹೋಗಿದ್ದ ಹುಕ್ಕೇರಿ ತಾಲ್ಲೂಕಿನ ಐವರು ಯುವಕರನ್ನು ಗೋವಾದ ಅರಣ್ಯ ಇಲಾಖೆ ಸಿಬ್ಬಂದಿ ಮನಬಂದಂತೆ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪ್ರವಾಸಿಗರ ಬೆನ್ನು, ಕಾಲು ಕೈಗೆ ಬಾಸುಂಡೆ ಬರುವಂತೆ ಹಲ್ಲೆ ಮಾಡಲಾಗಿದೆ. ಯುವಕರ ಬಳಿ ಇದ್ದ ಹಣ ಕಿತ್ತುಕೊಂಡಿದ್ದಾರೆ. ಸೂರಲ್ ಜಲಪಾತ ವೀಕ್ಷಿಸಲು ಮಳೆಗಾಲದಲ್ಲಿ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹೋಗುತ್ತಾರೆ. ಅವರಿಂದ ಗೋವಾ ಅರಣ್ಯ ಇಲಾಖೆ ಸಿಬ್ಬಂದಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಯುವಕರು ದೂರಿದ್ದಾರೆ.